ಈಶ್ವರಪ್ಪ ಮನೆಯಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಸಚಿವರು, ಪತ್ನಿ 
ರಾಜ್ಯ

ಈಶ್ವರಪ್ಪ ಮನೆಯಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಸಚಿವರು, ಪತ್ನಿ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸಚಿವರು ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ನಡೆದಿದೆ. 

ಬೆಂಗಳೂರು: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸಚಿವರು ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ನಡೆದಿದೆ. 

ನಗರದ ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯಲ್ಲಿ ಎಸಿ ಸ್ವಿಚ್ ಹಾಕುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈಶ್ವರಪ್ಪ ಮತ್ತು  ಅವರ ಪತ್ನಿ ಮನೆಯಿಂದ ಹೊರಗೆ ಬಂದು ಅಳಿಯ ಸಂತೋಷ್'ಗೆ ವಿಚಾರ ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ. 

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದಾಗಲೇ ಈಶ್ವರಪ್ಪ ಅವರು ಮಲಗುವ ಕೋಣೆ ಸಂಪೂರ್ಣವಾಗಿ ಭಸ್ಮವಾಗಿದೆ. ರೂಮ್'ನಲ್ಲಿದ್ದ ಬೆಡ್, ಎಸಿ, ಬಟ್ಟೆಗಲು, ಸೋಫಾ, ಕರ್ಟನ್ ಎಲ್ಲವೂ ಸುಟ್ಟು ಭಸ್ಮವಾಗಿದೆ. ರಾತ್ರಿ ವೇಳೆಯೇ ದುರಸ್ತಿಗೊಳಿಸುವ ಕಾರ್ಯ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT