ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆ: ಆರೋಗ್ಯ ಸಚಿವ ಬಿ ಶ್ರೀರಾಮುಲು

Srinivasamurthy VN

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಸೋಂಕು ಪತ್ತೆಯಾಗಿದೆ.

ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, ಅಮೆರಿಕ ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ವೈದ್ಯರಿಗೆ ಸಹಕರಿಸಿ
ಇದೇ ವೇಳೆ 'ವೈದ್ಯರು, ನರ್ಸ್ ಹಾಗೂ ಆರೋಗ್ಯ ಅಧಿಕಾರಿಗಳು ತಮ್ಮ ಹಿತ ಬದಿಗಿಟ್ಟು, ಯಾವುದೇ ಸ್ವಾರ್ಥವಿಲ್ಲದೆ, ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿದ್ದಾರೆ. ನಿಮ್ಮ ಹಾಗೂ ಉಳಿದ ನಾಗರಿಕರ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದಯವಿಟ್ಟು ಅವರಿಗೆ ಸಹಕರಿಸಿ ಎಂದು ಸಾರ್ವಜನಿಕರಿಗೆ ಶ್ರೀರಾಮುಲು ಮನವಿ ಮಾಡಿದ್ದಾರೆ.

SCROLL FOR NEXT