ಈಶ್ವರಪ್ಪ 
ರಾಜ್ಯ

ಜಿಯಲಾಜಿಕಲ್ ಸರ್ವೇಯಿಂದ ಜಲಮೂಲ‌ ಹುಡುಕುವ ಪ್ರಯತ್ನ: ಸಚಿವ ಕೆ.ಎಸ್.ಈಶ್ಚರಪ್ಪ

ಬಯಲು ಸೀಮೆಯಲ್ಲಿ ಜಲಮೂಲ ಹುಡುಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ತಿಳಿಸಿದರು

ಬೆಂಗಳೂರು: ಬಯಲು ಸೀಮೆಯಲ್ಲಿ ಜಲಮೂಲ ಹುಡುಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಪಕ್ಷೇತರ ಶಾಸಕ ಶರತ್‍ ಕುಮಾರ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1500 ಅಡಿ ವರೆಗೂ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಯಲಾಜಿಕಲ್ ಸರ್ವೇ ಇಲಾಖೆ ಸಲಹೆ ಪಡೆದು ಸಾಧ್ಯವಾದಷ್ಟು ಕೊಳವೆ ಬಾವಿಗಳನ್ನು ಕೊರೆಸಲಾಗುವುದು. ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೂ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

2019-20 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ವಿವೇಚನ ಅನುದಾನದಡಿ ಪ್ರತಿ ಜಿಲ್ಲೆಗೆ ಒಂದು ಕೋಟಿ ರೂ.ವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ನೀಡಲಾಗಿದೆ. ತುರ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಟಾಸ್ಕ್ ಫೋರ್ಸ್ ಯೋಜನೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2018-19 ಹಾಗೂ 2019-20ನೇ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT