ಸಂಗ್ರಹ ಚಿತ್ರ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆ ಓಡಾಟ: ಸಿಬ್ಬಂದಿ, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಕೊರೋನಾ ಸೋಂಕಿತ ಯುವತಿಯೊಬ್ಬಳು ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿ, ಆಸ್ಪತ್ರೆಯ ಸುತ್ತಮುತ್ತ ಓಡಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. 

ಬೆಂಗಳೂರು: ಕೊರೋನಾ ಸೋಂಕಿತ ಯುವತಿಯೊಬ್ಬಳು ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿ, ಆಸ್ಪತ್ರೆಯ ಸುತ್ತಮುತ್ತ ಓಡಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. 

ಲಂಡನ್  ನಿಂದ ಮಾ.14ರಂದು ನಗರಕ್ಕೆ ಆಗಮಿಸಿದ್ದ 20 ವರ್ಷದ ಯುವತಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿತ್ತು. ಈ ಸೋಂಕಿತ ಯುವತಿ ವಿಕ್ಟೋರಿಯಾ ಆಸ್ಪತ್ರೆ ಆವರಣದದಲ್ಲಿ ಓಡಾಡಿಗ್ಗು, ಇದೀಗ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ತೀವ್ರ ಆತಂಕಕ್ಕೀಡಾಗುವಂತೆ ಮಾಡಿದೆ. 

ಯುವತಿಯು ಆಸ್ಪತ್ರೆಯ ನೆಫ್ರೋ ವಿಭಾಗದ ಮುಖ್ಯಸ್ಥ ಡಾ.ಉಮೇಶ್ ಸಂಬಂಧಿ ಎಂದು ಹೇಳಲಾಗುತ್ತಿದೆ. ಮಾ.14ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಯುವತಿಗೆ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಹೀಗಾಗಿ ಕಡ್ಡಾಯವಾಗಿ 14 ದಿನ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿತ್ತು. ಆದರೆ, ಇದನ್ನು ಉಲ್ಲಂಘಿಸಿ ಯುವತಿಯು ಮಾ.14 ರಂದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊದಿಗೆ ಮಾತುಕತೆ ನಡೆಸಿದ್ದಾರೆ. 

ಉಮೇಶ್ ಅವರು ಡಯಾಲಿಸಿಸ್ ವಿಭಾಗ ಸೇರಿದಂತೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೂ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಸೋಂಕಿತ ಯುವತಿ ಜೊತೆ ಪ್ರಾಥಮಿಕ ಸಂಪರ್ಕ ಸಾಧಿಸಿದ್ದ ಉಮೇಶ್ ಅವರು ಇತರೆ ಇಬ್ಬರು ವೈದ್ಯರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಆಸ್ಪತ್ರೆಯ ಇತರೆ ವೈದ್ಯರು ಹಾಗೂ ಸಿಬ್ಬಂದಿ ಮತ್ತು ಕೆಲ ರೋಗಿಗಳು ಸೇರಿದಂತೆ ನೂರಾರು ಜನರ ಸಂಪರ್ಕ ಮಾಡಿದ್ದಾರೆ. 

ಯುವತಿಗೆ ಸೋಂಕು ದೃಢಪಟ್ಟಿ ಮಾಹಿತಿ ಹೊರ ಬರುತ್ತಲೇ ಈ ಮೂವರು ವೈದ್ಯರು ನಾಪತ್ತೆಯಾಗಿದ್ದಾರೆ. ಇದರಿಂದ ಆಸ್ಪತ್ರೆಯ ವೈದ್ಯರು, ರೋಗಿಗಳು ಸೇರಿದಂತೆ ನಗರದ ಜನರದಲ್ಲಿ ಆತಂಕ ಹೆಚ್ಚಾಗಿದೆ. 

ನೆಫ್ರೋ ಯುರಾಲಜಿ ಸಂಸ್ಥೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್ ಹಾಗೂ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆಂದು ನಿತ್ಯ ನೂರಾರು ಮಂದಿ ಬರುತ್ತಾರೆ. ಈ ರೋಗಿಗಳಿಗೆ ಸೋಂಕು ಹರಡದಂತೆ ಎಷ್ಟು ಎಚ್ಚರ ವಹಿಸಿದರೂ ಸಾಲದು. ಹೀಗಿರುವಾಗ ಖುದ್ದು ವೈದ್ಯರೇ ಈ ರೀತಿ ಮಾಡಿರುವುದರಿಂದ ಎಲ್ಲಾ ಸಿಬ್ಬಂದಿ ಹಾಗೂ ರೋಗಿಗಳನ್ನು ತಪಾಸಣೆಗೆ ಒಳಪಡಿಸುವ ಒತ್ತಾಯ ಕೇಳಿ ಬರುತ್ತಿದೆ. 

ಪ್ರಸ್ತುತ ವೈದ್ಯರಿಗೂ ವೈರಸ್ ಲಕ್ಷಣಗಳು ಕಂಡು ಬಂದಿದ್ದು, ಪರೀಕ್ಷೆ ನಡೆಸಲಾಗಿದೆ. ಪ್ರಸ್ತುತ ಅಧಿಕಾರಿಗಳು ವರದಿಗಾಗಿ ಕಾಯುತ್ತಿದ್ದು, ವೈದ್ಯರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT