ಡಾ.ಸಿ.ಎನ್ ಅಶ್ವತ್ಥ ಣಅಯಾನಾ 
ರಾಜ್ಯ

ಸರ್ಕಾರಕ್ಕೆ ಹೊರೆಯಾದುದರಿಂದ ಲ್ಯಾಪ್‌ಟಾಪ್‌ ಯೋಜನೆ ಸ್ಥಗಿತ- ಡಾ.ಸಿ.ಎನ್‌. ಅಶ್ವತ್ಥ ನಾರಾಯಣ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಕೊಡುವ ಯೋಜನೆಯನ್ನು ಹಿಂದಿನ ಸರ್ಕಾರ ಜಾರಿಗೊಳಿಸಿದ್ದು, 2019-20ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ 1.09 ಲಕ್ಷ ವಿದ್ಯಾರ್ಥಿಗಳಿಗೆ 311 ಕೋಟಿ ರೂ.ವೆಚ್ಚದಲ್ಲಿ ಲ್ಯಾಪ್‌ಟಾಪ್ ಕೊಡಲಾಗಿದೆ. ಆದರೆ ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿರುವುದರಿಂದ ಈ ಸಾಲಿನಿಂದ ಯ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಕೊಡುವ ಯೋಜನೆಯನ್ನು ಹಿಂದಿನ ಸರ್ಕಾರ ಜಾರಿಗೊಳಿಸಿದ್ದು, 2019-20ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ 1.09 ಲಕ್ಷ ವಿದ್ಯಾರ್ಥಿಗಳಿಗೆ 311 ಕೋಟಿ ರೂ.ವೆಚ್ಚದಲ್ಲಿ ಲ್ಯಾಪ್‌ಟಾಪ್ ಕೊಡಲಾಗಿದೆ. ಆದರೆ ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿರುವುದರಿಂದ ಈ ಸಾಲಿನಿಂದ ಯೋಜನೆಯನ್ನು ಕೈಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ 2019-20ನೆ ಸಾಲಿನಲ್ಲಿ ಲಾಪ್‌ಟಾಪ್ ಕೊಡಲಾಗಿದೆ. ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಎಂದು ನಿರ್ಧಾರವಾಗಿತ್ತು. ಹಣಕಾಸು ಇಲಾಖೆ ಕೂಡ ಇದಕ್ಕೆ ಅನುಮೋದನೆ ನೀಡಿತ್ತು. ಟೆಂಡರ್‌ ಮತ್ತು ವರ್ಕ್‌ ಆರ್ಡರ್‌ ಕೂಡ ಆ ಸರ್ಕಾರವೇ ಮಾಡಿತ್ತು, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿದರೆ ಮುಂದಿನ ಹಲವು ವರ್ಷಗಳವರೆಗೆ ಅವರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದರು.

ರಾಜ್ಯದ 400 ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ನ್ಯಾಕ್ ಅಕ್ರಡೇಷನ್ ಕೂಡ ಹಲವು ಕಾಲೇಜುಗಳಿಗೆ ಸಿಕ್ಕಿಲ್ಲ. ಮೊದಲು ಮೂಲಭೂತ ಸೌಲಭ್ಯ ಒದಗಬೇಕು ಎಂಬ ಉದ್ದೇಶದಿಂದ ಮುಂದಿನ ವರ್ಷಕ್ಕೆ ಈ ಯೋಜನೆಯನ್ನು ವಿಸ್ತರಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮೊದಲು ಪಟ್ಟಿ ಮಾಡಿದ ಪ್ರಕಾರ, 2019-20ನೇ ಸಾಲಿನಲ್ಲಿ 96,483 ವಿದ್ಯಾರ್ಥಿಗಳ ಹೆಸರಿತ್ತು. ನಂತರ ಇದು 1 ಲಕ್ಷದ 9 ಸಾವಿರದ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಹೆಸರು ಬಿಟ್ಟು ಹೋಗಿದ್ದರೆ ಅವರ ಹೆಸರನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT