ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ವೈರಸ್ ಭೀತಿ: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಾರ್ ರೂಂ ಆರಂಭ

ನಗರದ 198 ವಾರ್ಡ್ ಗಳಲ್ಲಿ ಕೊರೋನಾ ವೈರಸ್ ಹರಡದಂತೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಗಾ ವಹಿಸಲು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೋನಾ ವೈರಸ್ ವಾರ್ ರೂಂ ಸಿದ್ಧಪಡಿಸಲಾಗಿದ್ದು, ವಾರ್ ರೂಂನಲ್ಲಿ ದಿನದ 24 ಗಂಟೆಗಳಲ್ಲಿಯೂ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆಂಬು ಬಿಬಿಎಂಯಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೇಳಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 20 Mar 2020, 12:05 pm

ಬೆಂಗಳೂರು: ನಗರದ 198 ವಾರ್ಡ್ ಗಳಲ್ಲಿ ಕೊರೋನಾ ವೈರಸ್ ಹರಡದಂತೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಗಾ ವಹಿಸಲು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೋನಾ ವೈರಸ್ ವಾರ್ ರೂಂ ಸಿದ್ಧಪಡಿಸಲಾಗಿದ್ದು, ವಾರ್ ರೂಂನಲ್ಲಿ ದಿನದ 24 ಗಂಟೆಗಳಲ್ಲಿಯೂ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆಂಬು ಬಿಬಿಎಂಯಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದ ಒಂದು ಅಪ್ಲಿಕೇಷನ್ ಬಳಸಿಕೊಂಡು ನಗರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು, ಸೋಂಕು ದೃಫಟ್ಟ ಪ್ರದೇಶ ನಕ್ಷೆ ಸಿದ್ಧಪಡಿಸುವುದು, ಬಿಬಿಎಂಪಿ ಕೈಗೊಂಡ ಕ್ರಮಗಳು ವಲಯ ಮಟ್ಟದಲ್ಲಿ ಜಾರಿಯಾಗಿವೆಯೇ ಎಂಬುದನ್ನು ವಾರ್ ರೂಂ ನಿಂದ ನಿಗಾವಹಿಸಲಾಗುವುದು ಎಂದು ಹೇಳಿದ್ದಾರೆ. 

ಜೊತೆಗೆ ದತ್ತಾಂಶ ಸಂಗ್ರಹಣೆ, ಸೋಂಕು ದೃಢಪಟ್ಟ ಪ್ರದೇಶದಲ್ಲಿ ಎಷ್ಟು ಕುಟುಂಬಗಳಿವೆ, ಎಷ್ಟು ಮಂದಿ ವಾಸವಾಗಿದ್ದಾರೆ ಎಂಬ ಮಾಹಿತಿ ಪಟ್ಟಿ ಸಿದ್ಧಪಡಿಸುವುದು ಸೇರಿದಂತೆ ಇತರೆ ಕಾರ್ಯ ನಡೆಯಲಿದೆ. ಒಟ್ಟು 15 ಮಂದಿ ತಲಾ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆಂದು ತಿಳಿಸಿದ್ದಾರೆ. 

Advertisement

Advertisement

ಕೊರೋನಾ ವಾರ್ ರೂಂ ಮೇಲ್ವಿಚಾರಣೆ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ನ ವ್ಯವಸ್ಥಾಪ ನಿರ್ದೇಶಕಿ ಹೆಪ್ಲಿಬಾರಾಣಿ ಕೊರ್ಲಾಪಾಟಿಯವರು ವಹಿಸಲಿದ್ದಾರೆ. ತಂಡದ ಒಳ ನಿರ್ವಹಣೆಗಾಗಿ ಡಾ.ವೆಂಕಟೇಶ್, ಬಫರ್ ಜೋನ್ ಭಾಗದಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಹಣಕಾಸು ವೆಂಕಟೇಶ್ ಕಾರ್ಯನಿರ್ವಹಿಸಿದ್ದಾರೆ. ಇವರ ಸಹಾಯಕರಾಗಿ ಡಾ.ಮಧುಸೂಧನ್ ಕಾರ್ಯನಿರ್ವಹಿಸಲಿದ್ದಾರೆಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement