ರಾಜ್ಯ

ಕರ್ನಾಟಕದಲ್ಲಿ ಇಂದು ಮತ್ತೆ 3 ಕೊರೋನಾ ಸೋಂಕು ದೃಢ: ಕೊವಿಡ್-19 ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ

Sumana Upadhyaya

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಕೊರೋನಾ ವೈರಸ್ ಸೋಂಕಿತ 3 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. 

ಇಂದು ಬೆಳಗ್ಗೆ ಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮೆಕ್ಕಾ ಪ್ರವಾಸದಿಂದ ಬಂದ 32 ವರ್ಷದ ವ್ಯಕ್ತಿಯಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದರು. ಇದೀಗ ಮತ್ತಿಬ್ಬರಲ್ಲಿ ದೃಢಪಟ್ಟಿದೆ ಎಂದಿದ್ದಾರೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಹೆಚ್ಚು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 

ನಿನ್ನೆಯವರೆಗೆ 15 ಜನರಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಅವರಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಸಚಿವರೇ ತಿಳಿಸಿದ್ದರು.

ಇನ್ನು ಕೊರೋನಾ ವೈರಸ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಕಚೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಕೋವಿಡ್-19 ರೋಗ ಪೀಡಿತರಿಗೆ, ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದೆ. ಇದುವರೆಗೆ 4390 ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

SCROLL FOR NEXT