ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ವೈರಸ್ ದೃಢ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ

ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನವೇ ರಾಜ್ಯದಲ್ಲಿ ಮೂವರಿಗೆ ಕೊವಿಡ್ - 19 ಇರುವುದು ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 21 Mar 2020, 3:18 pm

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನವೇ ರಾಜ್ಯದಲ್ಲಿ ಮೂವರಿಗೆ ಕೊವಿಡ್ - 19 ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಅಲ್ಲದೆ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 290ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮೆಕ್ಕಾ ಪ್ರವಾಸದಿಂದ ಬಂದ 32 ವರ್ಷದ ವ್ಯಕ್ತಿಯಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದರು. ಇದೀಗ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಸುಧಾಕರ್ ತಿಳಿಸಿದ್ದಾರೆ.

Advertisement

Advertisement

ನಿನ್ನೆಯವರೆಗೆ 15 ಜನರಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಅವರಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಸಚಿವರೇ ತಿಳಿಸಿದ್ದರು.

ಇನ್ನು ಕೊರೋನಾ ವೈರಸ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಕಚೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಕೋವಿಡ್-19 ರೋಗ ಪೀಡಿತರಿಗೆ, ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದೆ. ಇದುವರೆಗೆ 4390 ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement