ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್‌-19 ಬಗ್ಗೆ ನೈಜ ಮಾಹಿತಿ ನೀಡಲು ‘ಕೊರೊನಾ ಯೋಧರು" ಬೇಕಾಗಿದ್ದಾರೆ...

ರಾಜ್ಯ ಸರ್ಕಾರವು ಕೊರೊನಾ ಸೋಂಕು ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ ಸೋಂಕು ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅದರ ಭಾಗವಾಗಿ, ಕೊರೊನಾ ವೈರಸ್ ಬಗ್ಗೆ ಹರಡುವ ವದಂತಿಗಳು ಹಾಗೂ ಅಪಪ್ರಚಾರಗಳನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಪ್ರಾರಂಭಿಸಿರುವ ಕಾರ್ಯಕ್ರಮಕ್ಕೆ ಸ್ವಯಂ ಸೇವಕರನ್ನು ಆಹ್ವಾನಿಸಿದೆ.

ಸರ್ಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧ ಹೋರಾಡಲು ಇದೊಂದು ಸದವಕಾಶವಾಗಿದೆ. ‘ಕೊರೊನಾ ಯೋಧ’ರೆಂದೇ ಕರೆಯಲ್ಪಡುವ ಈ ಸ್ವಯಂ ಸೇವಕರು ರಾಜ್ಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಹರಡುವ ವದಂತಿಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು ಸಹಕಾರಿಯಾಗಲಿದ್ದಾರೆ. ಅಲ್ಲದೇ, ಸ್ಥಳೀಯವಾಗಿ ಕೊರೋನಾ ಸಂಬಂಧಿತ ವಿದ್ಯಮಾನಗಳನ್ನು ತಂಡದ ಗಮನಕ್ಕೆ ತರಲು ಶ್ರಮವಹಿಸುವರು.

ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿಗಳು ಸ್ವೀಕೃತವಾಗುತ್ತಿದ್ದು, ನೋಂದಾಯಿತ ಸ್ವಯಂ ಸೇವಕರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಸೂಕ್ತ ತರಬೇತಿ, ಸುರಕ್ಷತಾ ಕಿಟ್ ಹಾಗೂ ಗುರುತಿನ ಚೀಟಿಯನ್ನು ನೀಡಲಾಗುವುದು.

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 4 ಸ್ವಯಂಸೇವಕರು ದಿನಕ್ಕೆ ನಾಲ್ಕು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವರು. ಬೆಂಗಳೂರು ನಗರದಲ್ಲೆ ಸುಮಾರು 120 ಸ್ವಯಂ ಸೇವಕರಿಗೆ ಅವಕಾಶವಿದ್ದು, ರಾಜ್ಯಾದ್ಯಂತ ಸುಮಾರು 3000 ಕೊರೋನಾ ಯೋಧರು ನೋಂದಾಯಿಸುವ ನಿರೀಕ್ಷೆಯಿದೆ. ಆನ್‍ಲೈನ್ ಅರ್ಜಿ ಮೂಲಕ ಮೊದಲ ದಿನವೇ 400 ಕ್ಕೂ ಹೆಚ್ಚು ಸ್ವಯಂ ಸೇವಕರು ನೋಂದಾಯಿಸಿಕೊಂಡಿದ್ದಾರೆ.
    
ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಇಚ್ಛಿಸುವವರು https:ovid19.karnataka.gov.in/coronawarrior.html ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!