ಕೊರೋನಾ ವೈರಸ್: 4 ದಿನಗಳ ಬಳಿಕ ರಾಜ್ಯಕ್ಕೆ ಬ್ರೇಕ್ ನೀಡಿದ ಸೋಂಕು
ನಾಲ್ಕು ದಿನಗಳ ಬಳಿಕ ಕೊರೋನಾ ಸೋಂಕು ರಾಜ್ಯದಲ್ಲಿ ಬ್ರೇಕ್ ನೀಡಿದ್ದು, ಯಾವುದೇ ಸೋಂಕು ದೃಢಪಟ್ಟ ಪ್ರಕರಣ ಶುಕ್ರವಾರ ವರದಿಯಾಗಿಲ್ಲ. ಅಲ್ಲದೆ, ಇದೇ ಮೊದಲ ಬಾರಿಗೆ ಸೋಂಕಿತರೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರು: ನಾಲ್ಕು ದಿನಗಳ ಬಳಿಕ ಕೊರೋನಾ ಸೋಂಕು ರಾಜ್ಯದಲ್ಲಿ ಬ್ರೇಕ್ ನೀಡಿದ್ದು, ಯಾವುದೇ ಸೋಂಕು ದೃಢಪಟ್ಟ ಪ್ರಕರಣ ಶುಕ್ರವಾರ ವರದಿಯಾಗಿಲ್ಲ. ಅಲ್ಲದೆ, ಇದೇ ಮೊದಲ ಬಾರಿಗೆ ಸೋಂಕಿತರೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಸೋಂಕು ದೃಢಪಟ್ಟಿದ್ದ 15 ಜನರ ಪೈಕಿ ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 26 ವರ್ಷದ ಸೋಂಕಿತ ಟೆಕ್ಕಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಳ್ಲದೆ, ಮುಂದಿನ ಬುಧವರಾದ ವೇಳೆಗೆ ರಾಜೀವ್ ಗಾಂಧಿ ಎದೆರೋಗಗಳ ಆಸ್ತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೂ ನಾಲ್ಕು ಮಂದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸೋಂಕು ದೃಫಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ಮಂದಿ ಪೈಕಿ 5 ಮಂದಿ ಬುಧವಾರದ ವೇಳೆಗೆ ಬಿಡುಗಡೆಯಾಗಲಿದ್ದಾರೆ. ಅವದನ್ನು ಮುಂದಿನ 14 ದಿನಗಳ ಕಾಲ ಮನೆಯಲ್ಲಿಯೇ ಪ್ರತ್ಯೇಕವಾಗಿಟ್ಟು ನಿಗಾ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಯನಗರ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೆಕ್ಕಿ ಸಂಪೂರ್ಣ ಗುಣಮುಖರಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಫೆ.23 ರಂದು ಪತ್ನಿಯೊಂದಿಗೆ ಮಧುಚಂದ್ರಕ್ಕೆ ಗ್ರೀಸ್ ತೆರಳಿದ್ದ ವ್ಯಕ್ತಿಯು ಮಾ.6ರಂದು ಮುಂಬೈಗೆ ವಾಪಸ್ಸಾಗಿದ್ದರು. ಬಳಿಕ ಮಾ.8 ರಂದು ಮುಂಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಸೋಂಕಿತ ವ್ಯಕ್ತಿಗೆ ಕಳೆದ ಮಾ.12 ರಂದು ಸೋಂಕು ದೃಫಟ್ಟಿತ್ತು. ಜೊತೆಗೆ ಇವರ ಪತ್ನಿಗೂ ಆಗ್ರಾದಲ್ಲಿ ಸೋಂಕು ದೃಢಪಟ್ಟಿತ್ತು. ಇದೀಗ ಈ ವ್ಯಕ್ತಿಗೆ ಸೋಂಕು ಗುಣಮುಖವಾಗಿದ್ದು, ಶುಕ್ರವಾರ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.