ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೊರೋನಾ: ರಾಜ್ಯದ  9 ಜಿಲ್ಲೆಗಳು ಈ ಮಾಸಾಂತ್ಯದವರೆಗೆ ಬಂದ್, ನಾಳೆಯೂ ಸಾರಿಗೆ ಸೇವೆ ಇಲ್ಲ 

ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವ ಉದ್ದೇಶದಿಂದ ಮತ್ತೊಂದು ಸುತ್ತಿನ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ಕೋವಿಡ್ 19 ಸೋಂಕು ಕಂಡು ಬಂದಿರುವ 9 ಜಿಲ್ಲೆಗಳನ್ನು ಮಾಸಾಂತ್ಯದವರೆಗೆ ಬಂದ್ ಮಾಡುವ ತೀರ್ಮಾನ ತೆಗೆದುಕೊಂಡಿದೆ

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವ ಉದ್ದೇಶದಿಂದ ಮತ್ತೊಂದು ಸುತ್ತಿನ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ಕೋವಿಡ್ 19 ಸೋಂಕು ಕಂಡು ಬಂದಿರುವ 9 ಜಿಲ್ಲೆಗಳನ್ನು ಮಾಸಾಂತ್ಯದವರೆಗೆ ಬಂದ್ ಮಾಡುವ ತೀರ್ಮಾನ ತೆಗೆದುಕೊಂಡಿದೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಗರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ಮಹತ್ವದ  ತುರ್ತು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸೋಂಕು ಕಂಡು ಬಂದಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ,  ಬೆಳಗಾವಿ, ಮಂಗಳೂರು ಜಿಲ್ಲೆಗಳನ್ನು ಲಾಕ್ ಔಟ್ ಮಾಡಲಾಗುತ್ತಿದೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ. ಎಸಿ ಬಸ್  ಸೇವೆ ಮಾರ್ಚ್ 31ರವರೆಗೆ ಇರುವುದಿಲ್ಲ, ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಗೆಗಳಲ್ಲಿ ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು, ಇಂದು ರಾತ್ರಿ 9 ಗಂಟೆಗೆ ಜನತಾ ಕರ್ಫೂ ಮುಗಿಯಲಿದೆ. ಆದರೆ, ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಮಧ್ಯೆ ಮಾರ್ಚ್ 31ರವರೆಗೂ ನಮ್ಮ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT