ರಾಜ್ಯ

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ

Sumana Upadhyaya

ಬೆಂಗಳೂರು:ಖಾಲಿ ರಸ್ತೆಯಲ್ಲಿ ಬೌನ್ಸರ್ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಸವಾರನೋರ್ವ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಫ್ಲೈ ಓವರ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ‌.


ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ರಸ್ತೆಗಳು ಖಾಲಿ ಇವೆ. ಈ ಖುಷಿಯಲ್ಲಿ ಇಬ್ಬರು ಯುವಕರು ಬೈಕ್ ಮೇಲೆ ಕುಳಿತು ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.


ಹಳೆಗುಡ್ಡದಹಳ್ಳಿ ನಿವಾಸಿ 19 ವರ್ಷದ ಗಜೇಂದ್ರ ಮೃತ ಸವಾರ. ಗಂಭೀರವಾಗಿ ಗಾಯಗೊಂಡ 20 ವರ್ಷದ ಯುವಕ ಶಿವಕುಮಾರ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ.

SCROLL FOR NEXT