ರಾಜ್ಯ

ಕೊರೋನಾ ವೈರಸ್: ಅಂತರ್ ರಾಜ್ಯ ಬಸ್ ಸೇವೆ ಮಾರ್ಚ್‌ 31ರ ವರೆಗೆ ಸ್ಥಗಿತ

Srinivasamurthy VN

ಬೆಂಗಳೂರು: ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ವೇಗದೂತ ಹಾಗೂ ರಾಜಹಂಸ ಬಸ್ಸುಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಇಲ್ಲದೆ (unreserved passengers) ಪ್ರಯಾಣಿಸುವವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಪಡೆಯುವ ವ್ಯವಸ್ಥೆಯನ್ನು (COVID-19 ಸೋಂಕಿತ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸಿದ ಸಮಯದಲ್ಲಿ ಇತರೆ ಪ್ರಯಾಣಿಕರ ಮಾಹಿತಿ ದೊರೆಯದಂತಾಗುವ ಕಾರಣದಿಂದ) ಈಗಿನಿಂದಲೇ ಮುಂದಿನ‌ ಆದೇಶದವರೆಗೆ ಪ್ರಾರಂಭಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಹುಬ್ಬಳ್ಳಿ-ಧಾರವಾಡ ಸಾರಿಗೆ ಸಂಚಾರ ಸ್ಥಗಿತ
ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೊನಾ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ ಬಿಆರ್ ಟಿಎಸ್ ಹಾಗೂ ಬೇಂದ್ರೆ ಬಸ್ ಸಂಚಾರವನ್ನು ಮಾರ್ಚ್ 31ರವರೆಗೂ ಸ್ಥಗಿತಗೊಳಿಸಿ ಎಂದು ಆದೇಶ ಹೊರಡಿಸಿದೆ. 

SCROLL FOR NEXT