ವೆನ್ ಲಾಕ್ ಆಸ್ಪತ್ರೆ 
ರಾಜ್ಯ

ಮಂಗಳೂರಿಗೂ ವ್ಯಾಪಿಸಿದ ಕೋವಿಡ್-19: ಭಟ್ಕಳದ ವ್ಯಕ್ತಿಯಲ್ಲಿ ಸೋಂಕು ಪತ್ತೆ 

ಕಡಲತಡಿ ಮಂಗಳೂರಿಗೆ ಕೊರೋನಾ ವೈರಸ್ ವ್ಯಾಪಿಸಿದೆ. ದುಬೈನಿಂದ ನಗರಕ್ಕೆ ಬಂದಿದ್ದ ಭಟ್ಕಳದ ವ್ಯಕ್ತಿಯೊಬ್ಬರಿಗೆ  ಸೋಂಕು ತಗುಲಿರುವುದು ಪತ್ತೆಯಾಗಿದೆ.

ಮಂಗಳೂರು:ಕಡಲತಡಿ ಮಂಗಳೂರಿಗೆ ಕೊರೋನಾ ವೈರಸ್ ವ್ಯಾಪಿಸಿದೆ.ದುಬೈನಿಂದ ನಗರಕ್ಕೆ ಬಂದಿದ್ದ ಭಟ್ಕಳದ ವ್ಯಕ್ತಿಯೊಬ್ಬರಿಗೆ  ಸೋಂಕು ತಗುಲಿರುವುದು ಪತ್ತೆಯಾಗಿದೆ.

ಸೋಂಕಿತ ವ್ಯಕ್ತಿಯ ಗಂಟಲು ದ್ರವದ ಮಾದರಿ ವರದಿ ಬಂದಿದ್ದು, ಕೋವಿಡ್ -19 ದೃಢಪಟ್ಟಿದೆ. ಆ ವ್ಯಕ್ತಿಗೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ  ಮುಂದುವರೆಸಲಾಗಿದೆ.

ಇದೇ 19ರಂದು ಮಂಗಳೂರಿಗೆ ಬಂದಿದ್ದ ಆ ವ್ಯಕ್ತಿಯನ್ನು ವಿಮಾನ ನಿಲ್ದಾಣದಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಕೊರೋನಾ ಸೋಂಕು ಶಂಕೆಯ ಮೇರೆಗೆ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ , ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ಜಿಲ್ಲಾದಿಕಾರಿ ಸಿಂಧೂ. ಬಿ. ರೂಪೇಶ್ ತಿಳಿಸಿದ್ದಾರೆ.

ದುಬೈನಿಂದ ಬಂದ ಸ್ಪೈಸ್ ಜೆಟ್ ವಿಮಾನದಲ್ಲಿ ಈ ವ್ಯಕ್ತಿ ಪಯಣಿಸಿದ್ದು, ಅದರಲ್ಲಿ 165 ಜನ ಪ್ರಯಾಣಿಕರಿದ್ದರು. ಅವರೆಲ್ಲರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!