ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ವೈರಸ್: ಲಾಕ್ ಡೌನ್‌ ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಚಿಂತನೆ

ಕೊರೋನಾ ಸೋಂಕು ಕಂಡುಬಂದ 9 ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ 'ಲಾಕ್‌ಡೌನ್' ತೀರ್ಮಾನಕ್ಕೆ ಜನರು ಅಸಡ್ಡೆ ತೋರಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Lingaraj Badiger
Updated On : 23 Mar 2020, 1:56 pm

ಬೆಂಗಳೂರು: ಕೊರೋನಾ ಸೋಂಕು ಕಂಡುಬಂದ 9 ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ 'ಲಾಕ್‌ಡೌನ್' ತೀರ್ಮಾನಕ್ಕೆ ಜನರು ಅಸಡ್ಡೆ ತೋರಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಇಂದು ತುರ್ತು ಸಭೆ ನಡೆಸಿದ ಬಳಿಕ‌ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಇಡೀ ರಾಜ್ಯಕ್ಕೆ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಈ ಬಗ್ಗೆ ಇಂದು ಸಂಜೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಈ ಬಗ್ಗೆ ಇಂದು ಸಂಜೆ ಮತ್ತೊಂದು ಸಭೆ ಬಳಿಕ ಇಡೀ ರಾಜ್ಯಕ್ಕೆ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇವೆ. ಈಗಾಗಲೇ ಜನರ ಓಡಾಟ ಹೆಚ್ಚಾಗಿದೆ. ಇದು ನಮ್ಮ ಗಮನಕ್ಕೆ ಬಂದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗಾಗಿ ಸಂಜೆ ರಾಜ್ಯವೇ ಲಾಕ್ ಡೌನ್ ಮಾಡಿವ ಬಗ್ಗೆ ಸಭೆ ಸೇರಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

Advertisement

Advertisement

ನಿನ್ನೆ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ಆದೇಶಿಸಲಾಗಿತ್ತು. ಆದರೆ ಈ ಬಗ್ಗೆ ಜನರಿಂದ ಸರಿಯಾದ ಪ್ರತಿಕ್ರಿಯೆ ಬಾರದ ಹಾಗೂ ಜನರು ಎಚ್ಚೆತ್ತುಕೊಳ್ಳದ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಸರ್ಕಾರ ಮುಂದಾಗಿದೆ.

ಲಾಕ್ ಡೌನ್ ನಿಂದ ಹಲವರಿಗೆ ತೊಂದರೆಯಾಗಿದ್ದು, ಬೆಂಗಳೂರಿನ ಬಡ ಜನರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಇನ್ನು ಕೋವಿದ್19 ಗೆ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವ ಸಂಬಂಧ  30 ಫೀವರ್ ಕ್ಲಿನಿಕ್ ಸ್ಥಾಪಿಸಲಾಗಿದೆ, ಖಾಸಗಿ ಆಸ್ಪತ್ರೆಯ ಅರ್ಧದಷ್ಟು ವೈದ್ಯರು ಮತ್ತು ಅರೆಕಾಲಿಕ ಸಿಬ್ಬಂದಿ ಸಹಾಯ ಮಾ ಡಲು ಮುಂದೆ ಬಂದಿದ್ದಾರೆ. 1 ಸಾವಿರ  ವೆಂಟಿಲೇಟರ್  ಖರೀದಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ನಗರ ಪ್ರದೇಶಗಳಲ್ಲಿರುವ ಜನರು ಹಳ್ಳಿಗಳಿಗೆ ಹೋಗಬಾರದೆಂದು ಮನವಿ ಮಾಡಿರುವ ಸಿಎಂ, ಕೊರೋನಾ ಸೋಂಕನ್ನು ಗಂಭೀರವಾಗಿ ಪರಿಗಣಿಸಿ ಜನತೆ ಮನೆಯಿಂದ ಹೊರಗಡೆ ಬರಬಾರದು ಎಂದು ಮನವಿ ಮಾಡಿದ್ದಾರೆ.  ಮಾರ್ಚ್ 27 ರವರೆಗೂ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement