ಹೋಮ್ ಕ್ವಾರಂಟೈನ್ ವೇಳೆ ಮಾರುಕಟ್ಟೆಗೆ ಭೇಟಿ, ಮಹಿಳೆ ವಿರುದ್ದ ಎಫ್ ಐಆರ್
ಹೋಮ್ ಕ್ವಾರಂಟೈನ್ ನಲ್ಲಿದ್ದ ನಿಯಮಾವಳಿ ಉಲ್ಲಂಘಿಸಿ ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿದ್ದ 23 ವರ್ಷದ ಮಹಿಳೆಯೊಬ್ಬಳ ಮೇಲೆ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ
ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿದ್ದ ನಿಯಮಾವಳಿ ಉಲ್ಲಂಘಿಸಿ ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿದ್ದ 23 ವರ್ಷದ ಮಹಿಳೆಯೊಬ್ಬಳ ಮೇಲೆ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ
ಬೆಂಗಳೂರಿನ ವಿಜಯನಗರ ವಾಸಿಯಾಗಿರುವ ಮಹಿಳೆ ಮಾರ್ಚ್ 22ರಂದು ದುಬೈ ಭೇಟಿಯ ನಂತರ ಬೆಂಗಳೂರು ನಗರಕ್ಕೆ ವಾಪಸ್ಸಾಗಿದ್ದರು ಎಂದು ವಿಜಯನಗರ ಠಾಣಾ ಪೊಲೀಸರು ತಿಳಿಸಿದ್ದಾರೆ
ನಗರ ಪೊಲೀಸರು ಆಕೆಯ ಮನೆಗೆ ಭೇಟಿ ನೀಡಿ, ಹೋಮ್ ಕ್ವಾರಂಟೈನ್ ಒಳಗಾಲು ಆಕೆಯ ಕೈಮೇಲೆ ಮುದ್ರೆ ಹಾಕಿ, ಮನೆ ಬಿಟ್ಟು ಹೊರಬರದಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಬಂದಿದ್ದರು. ಆದರೆ ಆಕೆ ಸೋಮವಾರ ರಿಲೆಯನ್ಸ್ ಪ್ರಶ್ ಭೇಟಿ ನೀಡಿದ್ದಳು ಈ ಬಗ್ಗೆ ಮಾಹಿತಿ ಹಾಗೂ ದೃಶ್ಯಾವಳಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಭಾರತೀಯ ದಂಡ ಸಂಹಿತೆ 269ರಡಿ ಆಕೆಯ ವಿರುದ್ದ ಪ್ರಕರಣ ದಾಖಲಿಸಿದ್ದೇವೆ. ಆಕೆಯನ್ನು ಪತ್ತೆ ಹಚ್ಚಿ ಮನೆಯಲ್ಲಿಯೇ ಇರುವಂತೆ ಮತ್ತೆ ಎಚ್ಚರಿಕೆ ನೀಡಿದ್ದೇವೆ. ಆಕೆಯನ್ನು ಸರ್ಕಾರಿ ಕ್ವಾರೆಂಟೈನ್ ಸೆಂಟರ್ ಗೆ ರವಾನಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಹೋಂಮ್ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಮನೆಗಳಲ್ಲಿಯೇ ಉಳಿಯಬೇಕು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇಂತಹ ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬಂದರೆ ಕೂಡಲೇ ಬಂಧಿಸಿ ಅವರನ್ನು ಸರ್ಕಾರಿ ಕ್ವಾರಂಟೈನ್ ಗೆ ರವಾನಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.