ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಲೋಗೋ 
ರಾಜ್ಯ

ರಾಜಕೀಯ ಸದ್ಯಕ್ಕೆ ಬೇಡ,  ಪಕ್ಷದ ಕಚೇರಿಯಿಂದ ದೂರಉಳಿಯುವಂತೆ ಕಾರ್ಯಕರ್ತರಿಗೆ ಕರೆ

ಕೊರೋನಾ ವೈರಸ್ ಭಯದಿಂದಾಗಿ ಎಲ್ಲಾ ರಾಜಕೀಯ ಪಕ್ಷಗಳ ಬಾಗಿಲು ಮುಚ್ಚಿವೆ, ಮಾರ್ಚ್ 31 ರ ವರೆಗೆ  ಯಾವುದೇ ಕಾರ್ಯಕರ್ತರೂ ಪಕ್ಷದ ಕಚೇರಿಗೆ ಬರದಂತೆ ನಾಯಕರು ಮನವಿ ಮಾಡಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಭಯದಿಂದಾಗಿ ಎಲ್ಲಾ ರಾಜಕೀಯ ಪಕ್ಷಗಳ ಬಾಗಿಲು ಮುಚ್ಚಿವೆ, ಮಾರ್ಚ್ 31 ರ ವರೆಗೆ  ಯಾವುದೇ ಕಾರ್ಯಕರ್ತರೂ ಪಕ್ಷದ ಕಚೇರಿಗೆ ಬರದಂತೆ ನಾಯಕರು ಮನವಿ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಒಬ್ಬ ಸಿಬ್ಬಂದಿಮೂರು ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.  ಮತ್ತೊಬ್ಬರು ಮತ್ತೊಂದು ಶಿಫ್ಟ್ ನಲ್ಲಿ ಕೆಲಸ ಮಾಡುತ್ತಾರೆ. ಮಲ್ಲೇಶ್ವರನಲ್ಲಿರುವ ಜಗನ್ನಾಥ ಭವನದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ,  ನೋಡಿಕೊಳ್ಳುತ್ತಿದ್ದಾರೆ.

ಯಾವುದೇ ಮಹತ್ವದ ಸಭೆಗಳನ್ನು ನಡೆಸುತ್ತಿಲ್ಲ, ತೀರಾ ತುರ್ತಿದ್ದರೇ ಮಾತ್ರ ಸಭೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.  ಸದ್ಯಕ್ಕೆ ಯಾವುದೇ ಸಚಿವರು ಪಕ್ಷದ ಕಚೇರಿಗೆ ಹಾಜರಾಗದಂತೆ ಸೂಚಿಸಲಾಗಿದೆ.

ಬಿಜೆಪಿಯಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಚೇರಿಗಳಲ್ಲಿಯೂ ಕಾರ್ಯಕರ್ತರು ಸೇರದಂತೆ ಸೂಚನೆ ನೀಡಲಾಗಿದೆ, ತಮ್ಮ ಕಚೇರಿಗೆ ಸದ್ಯ ಹೆಚ್ಚಿನ ಕಾರ್ಯಕರ್ತರು ಬರುತ್ತಿಲ್ಲ ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ