ರಾಜ್ಯ

ಗದಗ ಜಿಲ್ಲೆ: ತಾಂಡಾಗಳು ನಿಯಂತ್ರಿತ ಪ್ರದೇಶಗಳಾಗಿ ಘೋಷಣೆ

Sumana Upadhyaya

ಗದಗ:ಕೊರೋನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗದಗ ತಾಲೂಕಿನ ಅಡವಿ ಸೋಮಾಪುರ, ಪಾಪನಾಶಿ ತಾಂಡಾಗಳು ಹಾಗೂ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ, ಡೋಣಿ ತಾಂಡಾಗಳ ಸುತ್ತಲಿನ 500 ಮೀಟರ್ ಪ್ರದೇಶವನ್ನು ಮುಂದಿನ ಆದೇಶದವರೆಗೆ ನಿಯಂತ್ರಿತ ಪ್ರದೇಶಗಳೆಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿ ಭೌತಿಕ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಅಡವಿಸೋಮಾಪುರ, ಪಾಪನಾಶಿ ತಾಂಡಾಗಳು ಹಾಗೂ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ, ಡೋಣಿ ತಾಂಡಾಗಳಿಂದ ಜಿಲ್ಲೆಯ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ಈ ತಾಂಡಾಗಳಿಗೆ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. 

ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ. ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ತಿರುಗುವುದನ್ನು ನಿಷೇಧಿಸಲಾಗಿದೆ. ಈ ತಾಂಡಾಗಳ ಜನರು ಗೃಹ ಸಂಪರ್ಕ ತಡೆಯೊಳಗೆ ಇರುವುದು ಕಡ್ಡಾಯವಾಗಿಸಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ವಾಹನ ಸಂಚಾರವನ್ನು(ಕರ್ತವ್ಯ ನಿರತ ವಾಹನ ಹೊರತುಪಡಿಸಿ) ನಿರ್ಬಂಧಿಸಲಾಗಿದೆ. 


 ಈ ಪ್ರದೇಶಗಳಲ್ಲಿ ಕೊರೊನಾ ಸೊಂಕು ಪತ್ತೆ ಹಚ್ಚಲು, ಇತರೆ ರೋಗಗಳು ಸೇರಿದಂತೆ ವೈದ್ಯಕೀಯ ಚಿಕಿತ್ಸೆ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ರಮವಹಿಸಬೇಕು. ಕೊರೊನಾ ಸೊಂಕು, ಪ್ರಕರಣಗಳು ಕಂಡುಬಂದಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ನಿರ್ದೇಶಿಸಲಾಗಿದೆ.

SCROLL FOR NEXT