ಅಂಗಡಿ ಮುಂಗಟ್ಟು 
ರಾಜ್ಯ

ಬಾಗಲಕೋಟೆ: ಅಗತ್ಯ ವಸ್ತುಗಳ ಖರೀದಿಗೆ ಸಮಯ ಕೊಡಿ; ತಪ್ಪುತ್ತೆ ಜನತೆಯ ಕಿರಿಕಿರಿ!

ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ವಸ್ತುಗಳ ಮಾರಾಟ ಕೇಂದ್ರಗಳ ಮುಂದೆ ಗ್ರಾಹಕ ನಿರ್ಬಂಧ ರೇಖೆಗಳನ್ನೇನೋ ಹಾಕುವ ವಿನೂತನ ಪ್ರಯೋಗ ಮಾಡಿದೆಯಾದರೂ ಗ್ರಾಹಕರು ಅಗತ್ಯ ಸಾಮಗ್ರಿಗಳ ಖರೀದಿಗೆ ಸಮಯ ನಿಗದಿ ಮಾಡದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಬಾಗಲಕೋಟೆ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ವಸ್ತುಗಳ ಮಾರಾಟ ಕೇಂದ್ರಗಳ ಮುಂದೆ ಗ್ರಾಹಕ ನಿರ್ಬಂಧ ರೇಖೆಗಳನ್ನೇನೋ ಹಾಕುವ ವಿನೂತನ ಪ್ರಯೋಗ ಮಾಡಿದೆಯಾದರೂ ಗ್ರಾಹಕರು ಅಗತ್ಯ ಸಾಮಗ್ರಿಗಳ ಖರೀದಿಗೆ ಸಮಯ ನಿಗದಿ ಮಾಡದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಬಾಗಲಕೋಟೆ ಜಿಲ್ಲಾಡಳಿತ ಜಿಲ್ಲೆಯ ಬಹುತೇಕ ಎಲ್ಲ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಔಷಧಿ ಅಂಗಡಿ, ದಿನಸಿ ಅಂಗಡಿ, ತರಕಾರಿ ಮಾರುಕಟ್ಟೆಯಲ್ಲಿನ ಅಂಗಡಿಗಳ ಮುಂದೆ ಅಂಗಡಿಗಳಿಗೆ ಬರುವ ಗ್ರಾಹಕರ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಗ್ರಾಹಕ ರೇಖೆಗಳನ್ನು ಹಾಕುವ ಜನಾಂದೋಲನವನ್ನೇ ರೂಪಿಸಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಲಾಕ್‌ಡೌನ್ ವೇಳೆ ಅಗತ್ಯ ವಸ್ತುಗಳು ಸಿಗುತ್ತವೋ ಹೇಗೆ ಎನ್ನುವ ಆತಂಕ ಮತ್ತು ಚಿಂತನೆಯಲ್ಲಿ ಸಾರ್ವಜನಿಕರು ಅಂಗಡಿ, ಮುಂಗಟ್ಟುಗಳಿಗೆ, ತರಕಾರಿ ಖರೀದಿಗೆ ಯಾವಾಗಲೆಂದರೆ ಆವಾಗ ಮನೆ ಬಿಟ್ಟು ಹೊರಗೆ ಬರುತ್ತಿದ್ದಾರೆ. ಇದರಿಂದ ಪೊಲೀಸರಿಗೂ ಕಿರಿಕಿರಿ ಆಗುತ್ತಿದೆ. ಸಾರ್ವಜನಿಕರಿಗೂ ತೊಂದರೆ ಆಗುತ್ತಿದೆ.

ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಾಮಗ್ರಿಗಳ ಖರೀದಿಗೆ ಸಮಯವನ್ನು ನಿಗದಿ ಪಡಿಸಬೇಕಿದೆ. ಆ ವೇಳೆಯಲ್ಲಿ ಮಾತ್ರ ಸಾರ್ವಜನಿಕರು ಮನೆಯಿಂದ ಹೊರ ಬಂದು ತಮಗೆ ನಿತ್ಯ ಅಗತ್ಯವಸ್ತುಗಳ ಖರೀದಿಗೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ವ್ಯಾಪಕವಾಗಿದೆ.

ಒಂದು ಬಾರಿ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಮನೆಯಿಂದ ಹೊರಗೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆಗೆ ತೆರಳಿದಲ್ಲಿ ವಾಪಸ್ ಹೊರಗೆ ಬರುವ ಸಾಹಸ ಮಾಡುವುದು ತಪ್ಪುತ್ತದೆ. ಕಾನೂನು ಸುವ್ಯವಸ್ಥೆಗೂ ಅಡ್ಡಿಯಾಗದು ಎನ್ನುವುದು ಬಹುತೇಕರ ಅಭಿಪ್ರಾಯವಾಗಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಆಗಿದ್ದು, ಇಲ್ಲಿಯೂ ಸಮಯ ನಿಗದಿ ಆದಲ್ಲಿ ಸಾರ್ವಜನಿಕರಿಗೂ ಅನುಕೂಲವಾಗಲಿದೆ. ಜನತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಸಹಕಾರಿ ಆಗಲಿದೆ. ಅಗತ್ಯ ವಸ್ತುಗಳ ಖರೀದಿ ಸಮಯದ ಬಳಿಕವೂ ಬರುವ ಜನತೆಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿ ಎನ್ನುವ ಅಭಿಪ್ರಾಯವನ್ನು ಬಹುತೇಕರು ವ್ಯಕ್ತ ಪಡಿಸುತ್ತಿದ್ದಾರೆ. 

ಇತರ ಜಿಲ್ಲೆಗಳಂತೆ ಇಲ್ಲಿಯೂ ಈ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಾವ ಕ್ರಮಕ್ಕೆ ಮುಂದಾಗಲಿದೆ ಎನ್ನುವುದನ್ನು ಕಾಯ್ದುನೋಡಬೇಕಷ್ಟೆ.

ವರದಿ: ವಿಠ್ಠಲ ಆರ್. ಬಲಕುಂದಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT