ಸಂಗ್ರಹ ಚಿತ್ರ 
ರಾಜ್ಯ

ಯುಗಾದಿ: ಮರಣ ತಂದ ಬೇವು 

ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.

ಬೆಂಗಳೂರು: ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.

35 ವರ್ಷದ ಕೆ.ಪಿ.ಅಗ್ರಹಾರದ ಕುಬೇರ ಮೃತಪಟ್ಟ ದುರ್ದೈವಿ. ಯುಗಾದಿ ಹಬ್ಬದ ದಿನ ಹಿರಿಯರಿಗೆ ಬೇವು-ಬೆಲ್ಲ ನೈವೇದ್ಯ ಮಾಡಬೇಕಿತ್ತು. ಕೊರೊನಾ ಸೋಂಕು ತಡೆಗಟ್ಟಲು ಭಾರತ್ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳು ಬಂದ್ ಆಗಿದ್ದು, ಎಲ್ಲಿಯೂ ಬೇವು ಸಿಕ್ಕಿರಲಿಲ್ಲ.

ಹೀಗಾಗಿ ಕುಬೇರ್ ಮರವೊಂದನ್ನು ಏರಿ ಬೇವು ಕೀಳಲು ಮುಂದಾಗಿದ್ದರು. ಅದೇ ವೇಳೆಯೇ ಕಾಲು ಜಾರಿ ಬಿದ್ದಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟದ್ದಾರೆ.

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕೆ.ಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಬೇರ ಅವರ ಪತ್ನಿ ಹಾಗೂ ಇಬ್ಬರೂ ಮಕ್ಕಳಿದ್ದು, ಇವರ ಆಕ್ರಂಧನ ಮುಗಿಲು ಮುಟ್ಟಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT