ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಪೊಲೀಸರಿಂದ ತಪಾಸಣೆ 
ರಾಜ್ಯ

ಬೆಂಗಳೂರು ನಗರದಲ್ಲಿ ಸಂಚಾರ ಪಾಸ್‌ ವಿತರಣೆ: ಯಾರಿಗೆಲ್ಲಾ ಪಾಸ್ ಲಭ್ಯ ಗೊತ್ತಾ?

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದ್ದು, ಈ ಅವಧಿಯಲ್ಲಿ ಅತ್ಯಗತ್ಯ ಸೇವೆಗಳಿಗಾಗಿ ಶ್ರಮಿಸುತ್ತಿರುವ ಸಿಬ್ಬಂದಿಗೆ ಸಂಚಾರ ಪಾಸ್ ನೀಡಲು ಕರ್ನಾಟಕ ಪೊಲೀಸ್ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದ್ದು, ಈ ಅವಧಿಯಲ್ಲಿ ಅತ್ಯಗತ್ಯ ಸೇವೆಗಳಿಗಾಗಿ ಶ್ರಮಿಸುತ್ತಿರುವ ಸಿಬ್ಬಂದಿಗೆ ಸಂಚಾರ ಪಾಸ್ ನೀಡಲು ಕರ್ನಾಟಕ ಪೊಲೀಸ್ ಇಲಾಖೆ ನಿರ್ಧರಿಸಿದೆ.

ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ಸಂಚರಿಸುತ್ತಿರುವವರ ಮೇಲೆ ಪೊಲೀಸರು ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳುತ್ತಿದ್ದು, ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸುತ್ತಿದ್ದಾರೆ. ಈ ವೇಳೆ ತುರ್ತು ಸೇವೆಗಳಾದ ವೈದ್ಯಕೀಯ ಸಿಬ್ಬಂದಿ, ಪತ್ರಕರ್ತರು, ಇ ಕಾಮರ್ಸ್ ಸಿಬ್ಬಂದಿ, ತರಕಾರಿ  ಮತ್ತು ದಿನಸಿ ಮಾರಾಟಗಾರರೂ ಕೂಡ ಲಾಕ್ ಡೌನ್ ನಿಯಮದಿಂದಾಗಿ ತಮ್ಮ ತಮ್ಮ ಕರ್ತವ್ಯಗಳಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇಂದು ಸಭೆ ನಡೆಸಿ ಸಂಚಾರ ಪಾಸ್ ವಿತರಿಸಲು ನಿರ್ಧರಿಸಿದ್ದಾರೆ. 

ಬೆಂಗಳೂರು ನಗರದಲ್ಲಿ ಅಗತ್ಯ ಸೇವೆ ಮತ್ತು ಸರಕು ಸಾಗಣೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಾಹನ ಸಂಚಾರಕ್ಕೆ ಪಾಸ್‌ಗಳನ್ನು ವಿತರಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ತಿಳಿಸಿದ್ದಾರೆ. ನಗರದ ಡಿಸಿಪಿ ಕಚೇರಿಗಳಲ್ಲಿ ಈ ಪಾಸುಗಳು ಲಭ್ಯವಾಗಲಿದ್ದು,.  ದಿನದ 24 ಗಂಟೆಯೂ ಪಾಸ್‌ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇಲಾಖೆ ನೀಡಿರುವ ಮಾಹಿತಿಯಂತೆ G ರಿಜಿಸ್ಟ್ರೇಷನ್ ಪ್ಲೇಟ್ ಇರುವ ಸರ್ಕಾರಿ ವಾಹನಗಳು, ಸರಕು ಸಾಗಣೆ ವಾಹನಗಳು, ಸಚಿವಾಲಯದ ನೌಕರರು, ಹೈಕೋರ್ಟ್‌ ನೌಕರರಿಗೆ ಸಂಚಾರ ಪಾಸ್ ನ ಅಗತ್ಯವಿಲ್ಲ. ಆದರೆ ಎಲ್ಲಾ ಸರ್ಕಾರಿ ಮತ್ತು ಹೈಕೋರ್ಟ್‌ ನೌಕರರು ಉದ್ಯೋಗದ  ಗುರುತಿನ ಪತ್ರ ಜೊತೆಯಲ್ಲಿರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಉಳಿದಂತೆ ಖಾಸಗಿ ಭದ್ರತಾ ಸಿಬ್ಬಂದಿಗಳು, ಪೆಟ್ರೊಲ್ ಬಂಕ್, ಗ್ಯಾಸ್ ಏಜೆನ್ಸಿ, ಎಲ್‌ಪಿಜಿ ಚಿಲ್ಲರೆ ವಿತರಕರು ಮತ್ತು ಸಿಬ್ಬಂದಿಗಳು, ಸ್ವಿಗ್ಗಿ, ಜೊಮಾಟೊ ನಂತಹ ಆಹಾರ ಸರಬರಾಜು ಸಂಸ್ಥೆಗಳ ನೌಕರರು, ಆನ್‌ಲೈನ್ ಔಷಧ ವಿತರಕರು, ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳ ನೌಕರರು,  ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸಿಬ್ಬಂದಿ, ದಿನಸಿ, ದಿನಬಳಕೆ ವಸ್ತುಗಳು, ಡೇರಿ, ಮಾಂಸ ಮತ್ತು ಮೀನು ಮಾರಾಟಮಳಿಗೆಗಳ ನೌಕರರು, ವೈದ್ಯಕೀಯ ಸಂಸ್ಥೆಗಳ ನೌಕರರು, ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾದಾತ ಸಂಸ್ಥೆಗಳ ಸಿಬ್ಬಂದಿ, ಅತ್ಯಗತ್ಯ ಸೇವೆ ಒದಗಿಸುವ ಐಟಿ  ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸಂಚಾರ ಪಾಸ್ ಗಳನ್ನು ವಿತರಿಸಲಾಗುತ್ತದೆ.

ಇದಲ್ಲದೆ ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಕ ಘಟಕಗಳಲ್ಲಿ ಕೆಲಸ ಮಾಡುವ ನೌಕರರು, ಷೇರು ಮಾರುಕಟ್ಟೆ ಸೇವಾದಾತ ಸಂಸ್ಥೆಗಳ ಸಿಬ್ಬಂದಿಗಳು, ಶೀತಲೀಕರಣ ಘಟಕ ಮತ್ತು ಗೋದಾಮು ಸೇವೆ ಒದಗಿಸುವ ಸಿಬ್ಬಂದಿ, ಅತ್ಯಗತ್ಯ ವಸ್ತುಗಳ ಉತ್ಪಾದನಾ ಘಟಕಗಳ  ಸಿಬ್ಬಂದಿ ಮತ್ತು ಸರ್ಕಾರದ ನಿರ್ಬಂಧ ಆದೇಶದ ಕಾರಣ ಮನೆಗಳಿಗೆ ತೆರಳಲು ಸಾಧ್ಯವಾಗದ ಪ್ರವಾಸಿಗರು ಉಳಿದುಕೊಂಡಿರುವ ಹೊಟೆಲ್ ಮತ್ತು ಲಾಡ್ಜ್‌ ಸಿಬ್ಬಂದಿಗಳು ಕಡ್ಡಾಯವಾಗಿ ಸಂಚಾರ ಪಾಸ್ ಗಳನ್ನು ಪಡೆಯಬೇಕು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT