ರಾಜ್ಯ

ಯುಗಾದಿಗಾಗಿ ಬೀದಿಗಿಳಿದ ಜನತೆ: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಕೊವಿದ್‍ -19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಬುಧವಾರ ಹತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. 

ಕೊರೋನಾ ವೈರಸ್‍ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಡಾ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ಸೋಂಕಿತರ ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ.

ಒಂದು ದಿನದಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ ಎರಡಂಕಿ ತಲುಪಿದೆ. ಸದ್ಯ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 51ಕ್ಕೆ ತಲುಪಿದೆ ಎಂದು ಹೇಳಿದರು. 

ಚಿಕ್ಕಬಳ್ಳಾಪುರ ಮೂಲದ 75 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಹಿಳೆ ವಯೋಮಾನ ಸಹಜ ಕಾಯಿಲೆಗಳಿಗೆ ಬಳಲುತ್ತಿದ್ದ ಕಾರಣ ಸೋಂಕಿನಿಂದ ಅವರು ಮೃತಪಟ್ಟಿದ್ದಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಬಗ್ಗೆ ವೈದ್ಯರ ಅಭಿಪ್ರಾಯ ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

SCROLL FOR NEXT