ಉಡುಪಿಯ 34 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು: ರಾಜ್ಯದಲ್ಲಿ ಕೋವಿಡ್ ಸಂಖ್ಯೆ 40 ಕ್ಕೆ ಏರಿಕೆ
ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಮಾ.25 ರಂದೂ ಕೊರೋನಾ ವೈರಸ್ ಸೋಂಕು ಹರಡಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಉಡುಪಿ: ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಮಾ.25 ರಂದೂ ಕೊರೋನಾ ವೈರಸ್ ಸೋಂಕು ಹರಡಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 6೦೦ಕ್ಕೆ ಸಮೀಪಿಸುತ್ತಿದ್ದು, ಬುಧವಾರ ಉಡುಪಿಯ 34 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ರಾಜ್ಯದಲ್ಲಿ ಕೋವಿಡ್-19 ಪೀಡಿತರ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ.
ಈ ವ್ಯಕ್ತಿ ಮಾರ್ಚ್.18 ರಂದು ದುಬೈ ನಿಂದ ಉಡುಪಿಗೆ ಆಗಮಿಸಿದ್ದ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಮಾ.23 ರಂದು ಆಸ್ಪತ್ರೆಗೆ ದಾಖಲಾಗಿದ್ದ. ವೈದ್ಯಕೀಯ ಪರೀಕ್ಷೆಯಲ್ಲಿ ಈ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.