ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಭೀತಿ: ಡೆತ್ ನೋಟ್ ಬರೆದು ಕೆ ಎಸ್ ಆರ್ ಟಿಸಿ ಸಿಬ್ಬಂದಿ ಆತ್ಮಹತ್ಯೆ

ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ.

ಉಡುಪಿ: ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾತ ಉಪ್ಪೂರಿನ ನರ್ನಾಡು ನಿವಾಸಿ 56 ವರ್ಷದ ಗೋಪಾಲಕೃಷ್ಣ ಮಡಿವಾಳ ಎಂದು ಗುರುತಿಸಲಾಗಿದ್ದು ಈತ ಕೆ ಎಸ್ ಆರ್ ಟಿಸಿಯಲ್ಲಿ ತರಬೇತುದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ.

"ತನಗೆ ಕೊರೋನಾ ಇದೆ" ಎಂದು ಡೆತ್ ನೋಟ್ ಬರೆದಿಟ್ಟಿದ್ದ ಗೋಪಾಲಕೃಷ್ಣ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅವರಲ್ಲಿ ಯಾವ ಕೊರೋನಾ ಲಕ್ಷಣಗಳಿರಲಿಲ್ಲ ಎಂದು ಅವರ ಕುಟುಂಬ ಮೂಲಗಳು ಹೇಳಿದೆ.

ಘಟನೆ ಬಗೆಗೆ ಬ್ರಹ್ಮಾವರ ಪೋಲೀಸರಿಗೆ ಮೃತರ ಕುಟುಂಬ ಮಾಹಿತಿ ನೀಡಿದ್ದು ತನಿಖೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT