ಸಿಎಂ ಯಡಿಯೂರಪ್ಪ 
ರಾಜ್ಯ

'ಇಂದಿರಾ ಕ್ಯಾಂಟೀನ್ ನಲ್ಲಿ ಫುಡ್ ಪ್ಯಾಕೇಟ್ ವಿತರಣೆ; ಕೊರೊನಾ ನಿರ್ವಹಣೆ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ'

ದೇಶದಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ.

ಬೆಂಗಳೂರು: ದೇಶದಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ.
 
ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳಬೇಕಾದ ಜರೂರು ಕ್ರಮಗಳು ಹಾಗೂ ಸಚಿವರಿಗೆ ಜವಾಬ್ದಾರಿ ವಹಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
 
ಕೊರೋನಾ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಆಯಾ ಜಿಲ್ಲಾಧಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಗಳ ಉಸ್ತುವಾರಿಗಳು ಕ್ಷೇತ್ರಕ್ಕೆ ಹೋಗಿ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಏ 14ರವರೆಗೆ ದೇಶಾದ್ಯಂತ ಲಾಕ್ ಡೌನ್ ಆಗಿರುವುದರಿಂದ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಇಂದಿರಾ ಕ್ಯಾಂಟೀನ್ ನಲ್ಲಿ ಫುಡ್ ಪ್ಯಾಕೆಟ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. 
ಮೂರು ನೀರಾವರಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟ್ರಾಕ್ಟರ್ ಟಿಲ್ಲರ್ ಸಾಲ ಬಡ್ಡಿ ಮನ್ನಾ ಅವಧಿಯನ್ನು ಮಾ 31 ರಿಂದ ಜೂ. 31 ರವರೆಗೆ ವಿಸ್ತರಣೆ ಮಾಡಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಪ್ರತಿದಿನದ ದಿನಸಿ ಹಂಚಿಕೆ ಮಾಡಲು ಸಹ ತೀರ್ಮಾನಿಸಲಾಗಿದೆ. 

ಅಗತ್ಯ ವಸ್ತುಗಳಾದ ಮಾಂಸ, ಬೆಳೆಕಾಳು, ತರಕಾರಿ, ಹಣ್ಣುಗಳು ಸೇರಿದಂತೆ ಆಹಾರಧಾನ್ಯಗಳು ಕೊರತೆಯಾಗದಂತೆ ಸರ್ಕಾರ ಕ್ರಮಕೈಗೊಳ್ಳಲು ಹಾಗೂ ರೈತರ ಬೆಳೆಗಳು ಗೋದಾಮಿಗೆ, ಗೋದಾಮಿನಿಂದ ಚಿಲ್ಲರೆ ಮಾರುಕಟ್ಟೆಗಳಿಗೆ ಸುಗಮವಾಗಿ ಸರಬರಾಜು ಮಾಡಲು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಮೀನುಗಾರರಿಗೆ ನೀಡಲಾಗುವ ಮತ್ಯೋತ್ಸವ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಹಂಚಿಕೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ನಿಗಮ ಮನೆಗಳನ್ನು ಹಂಚಿಕೆ ಮಾಡಲು ಹಿಂದೆ ಸರಿದ ಕಾರಣ ಇನ್ನುಮುಂದೆ ಮೀನುಗಾರಿಕೆ ಇಲಾಖೆಯಿಂದಲೇ ಮೀನುಗಾರರಿಗೆ ನೇರವಾಗಿ ಮನೆಗಳನ್ನು ನೀಡಲು ಅನುಮತಿ ನೀಡಿದ್ದು, 39.63 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು. 

ಕರ್ನಾಟಕ ಕಲ್ಲುಪುಡಿ ಕ್ರಷರ್ ಗಳನ್ನು ಫೆ 30ರೊಳಗೆ ನವೀಕರಣ ಮಾಡಬೇಕಿತ್ತು. ಆದರೆ ನವೀಕರಣ ವಿಳಂಬವಾಗಿರುವ ಕಾರಣ ಸುಗ್ರೀವಾಜ್ಞೆ ಮೂಲಕ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT