ತೇಜಸ್ವಿ ಸೂರ್ಯ 
ರಾಜ್ಯ

ಜನಸಂದಣಿ ತಡೆಯಲು ಕೆ.ಆರ್​. ಮಾರುಕಟ್ಟೆ ತರಕಾರಿ ಅಂಗಡಿಗಳು ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್  ಸಾಧ್ಯತೆ

 ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ಬೆಂಗಳೂರು : ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ತರಕಾರಿ, ಹಣ್ಣುಗಳನ್ನು ಕೊಳ್ಳಲು ಕೆ.ಆರ್​. ಮಾರುಕಟ್ಟೆಗೆ ಜನರು ಮುಗಿಬೀಳುತ್ತಿದ್ದಾರೆ. ಹೀಗಾಗಿ, ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮತ್ತು ಕೆ.ಆರ್. ಮಾರ್ಕೆಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇಲ್ಲಿ ಬಂದು ಪರಿಶೀಲನೆ ನಡೆಸಿದಾಗ ಬೆಳಗ್ಗೆಯಿಂದ ಹೆಚ್ಚು ಜನ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ತರಕಾರಿಗೆ ಚಂದ್ರಾ ಲೇಔಟ್, ವಿಜಯನಗರ, ಬಸವನಗುಡಿ ಕಡೆಯಿಂದ ಜನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಲಾಕ್​ಡೌನ್​ಗೆ ಆದೇಶಿಸಿದ್ದರೂ ಜನರು ಕೇಳುತ್ತಿಲ್ಲ. ಈಗ ಪರಿಶೀಲಿಸಿದಾಗ ಪರಿಸ್ಥಿತಿ ಗೊತ್ತಾಗಿದೆ. ಸಚಿವ ಆರ್. ಅಶೋಕ್ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಮಾರ್ಕೆಟ್ ವ್ಯಾಪಾರವನ್ನು ನಾಳೆಯೇ ಶಿಫ್ಟ್​ ಮಾಡುವ ಬಗ್ಗೆ ಚರ್ಚಿಸುತ್ತೇನೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕೆ.ಆರ್​. ಮಾರ್ಕೆಟ್​ನಲ್ಲಿರುವ ಅಂಗಡಿಗಳನ್ನು ಬಸವನಗುಡಿಯ ನ್ಯಾಷನಲ್ ಮೈದಾನ ಮತ್ತು ವಿಜಯನಗರದ ಮೈದಾನಕ್ಕೆ ಶಿಫ್ಟ್​ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುವುದು. ಅಲ್ಲಿ ತರಕಾರಿ ಮಾರಾಟಕ್ಕೆ ಅನುವು ಮಾಡಿ, ಅಂತರ ಕಾಯ್ದುಕೊಳ್ಳಲು ಸೂಚನೆ ಕೊಡಲಾಗುತ್ತದೆ. ಇದಕ್ಕೆ ಎರಡು ದಿನ ಸಮಯ ಬೇಕಾಗುತ್ತದೆ. ನಾಳೆಯೇ ಶಿಪ್ಟ್ ಮಾಡುವ ಬಗ್ಗೆ ಮೇಯರ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಸಹಾಯವಾಣಿ ತೆರೆಯಲಾಗಿದ್ದು, ತುರ್ತು ಸಂದರ್ಭದಲ್ಲಿ ಔಷಧಿ ತಲುಪಿಸುತ್ತೇವೆ. ಪುಂಡರು ಉಡಾಫೆ ಮಾಡಿಕೊಂಡು ರಸ್ತೆಯಲ್ಲಿ ಓಡಾಡುವುದು ಸರಿಯಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

SCROLL FOR NEXT