ಬಿಸಿ ಪಾಟೀಲ್ 
ರಾಜ್ಯ

ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಬಿತ್ತನೆ ಬೀಜಕ್ಕಾಗಿ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ರೈತರು ಬೆಳೆದ ಬೆಳೆಗಳನ್ನು ಕೊಯ್ಲು ಮಾಡಲು, ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮುಂಗಾರು ಪ್ರಾರಂಭವಾದರೆ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು ಸಾಗಾಣಿಕೆ ಮಾಡಲು ಅಗತ್ಯ ವಸ್ತುಗಳ ಕಾಯ್ದೆ ಅಡಿ ತಂದಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಾಗೂ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರು,‌ ಕೊಪ್ಪಳ,‌ ಬಳ್ಳಾರಿ ಹಾಗೂ ಇತರೆ ಭಾಗಗಳಲ್ಲಿ ಭತ್ತ ಬೆಳೆದ ರೈತರು ಅದರ ಕೊಯ್ಲಿಗೆ ಹೊರ ರಾಜ್ಯದಿಂದ ಕೊಯ್ಲು ಯಂತ್ರ ತರಬೇಕಾಗುತ್ತದೆ ಎಂಬ ಆತಂಕದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದು ಬೇಡ. ಬಿತ್ತನೆ ಮಾಡಲಾಗಲೀ ಅಥವಾ ಕೊಯ್ಲು ಮಾಡಲಾಗಲಿ ರೈತರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಬಿತ್ತನೆ ಕಾರ್ಯ ಕೃಷಿ ಕಾರ್ಯದಲ್ಲಿ‌ ತೊಡಗಬಹುದು. ರೈತರ ಕೃಷಿ ಚಟುವಟಿಕೆಗಳಿಗೆ ಯಾರೂ ಸಹ ತೊಂದರೆ ಮಾಡಬಾರದು. ಯಂತ್ರೋಪಕರಣ ತಂದು ಕೊಯ್ಲು ಕೃಷಿ ಚಟುವಟಿಕೆ ಮಾಡುವ ಮುನ್ನ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಕೃಷಿ ಚಟುವಟಿಕೆ ಮಾಡುವಾಗ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬಿತ್ತನೆ ಬೀಜ ಪಡೆಯಲು ಮತ್ತು ಫಸಲು ಸರಬರಾಜು ಮಾಡುವಾಗ ಇಲಾಖಾಧಿಕಾರಿಗಳಿಂದ ಸರಬರಾಜು ಮಾಡುವ ವಾಹನಗಳಿಗೆ ಕೃಷಿಕರು ಪಾಸ್ ಪಡೆಯಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT