ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ನಾಳೆಯಿಂದ ಲಾಕ್ ಡೌನ್ ಮತ್ತಷ್ಟು ಬಿಗಿ: ಇಂದಿರಾ ಕ್ಯಾಂಟೀನ್ ನಿಂದ ಪುಡ್ ಪ್ಯಾಕೆಟ್ ವಿತರಣೆ- ಮುಖ್ಯಮಂತ್ರಿ

ಕೊರೋನಾವೈರಸ್ ವಿರುದ್ಧದ ಸಮರದ ಹಿನ್ನೆಲೆಯಲ್ಲಿ  ಲಾಕ್ ಡೌನ್ ಜಾರಿಯಾಗಿದ್ದರೂ ಜನರು ಮಾತ್ರ ಗಂಭೀರವಾಗಿ ಪರಿಗಣಿಸಿಲ್ಲ.ಹಾಗಾಗಿ ನಾಳೆಯಿಂದ ಲಾಕ್ ಡೌನ್ ನ್ನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ಕೊರೋನಾವೈರಸ್ ವಿರುದ್ಧದ ಸಮರದ ಹಿನ್ನೆಲೆಯಲ್ಲಿ  ಲಾಕ್ ಡೌನ್ ಜಾರಿಯಾಗಿದ್ದರೂ ಜನರು ಮಾತ್ರ ಗಂಭೀರವಾಗಿ ಪರಿಗಣಿಸಿಲ್ಲ.ಹಾಗಾಗಿ ನಾಳೆಯಿಂದ ಲಾಕ್ ಡೌನ್ ನ್ನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,ಲಾಕ್ ಡೌನ್ ಜಾರಿಯಲ್ಲಿದ್ದರೂ ಜನರು ಗಂಭೀರವಾಗಿ ಪರಿಗಣಿಸದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮೊಂದಿಗೆ ಮಾತನಾಡಿದ್ದು, ನಾಳೆಯಿಂದ ಲಾಕ್ ಡೌನ್ ಮತ್ತಷ್ಟು ಬಿಗಿಗೊಳಿಸಲಾಗುವುದು, ಜಿಲ್ಲೆಗಳಲ್ಲಿನ ಲಾಕ್ ಡೌನ್ ಗೆ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.  

ಸಂಕಷ್ಟದಲ್ಲಿರುವ  ಬಡಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ನಿಂದ ಪುಡ್ ಪ್ಯಾಕೆಟ್ ವಿತರಣೆ ಮಾಡಲು ನಿರ್ಧರಿಸಲಾಗಿದೆ.ಇಂದಿರಾ ಕ್ಯಾಂಟೀನ್ ಗಳಲ್ಲಿ ಪುಡ್ ಪ್ಯಾಕೆಟ್ ಮಾದರಿಯಲ್ಲಿ ಆಹಾರವನ್ನು ವಿತರಿಸಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಸಂಕಷ್ಟದ ಸಂದರ್ಭದಲ್ಲಿ  ಜನರಿಗೆ ಅಗತ್ಯ ವಸ್ತುಗಳಾದ ಆಹಾರ ಧಾನ್ಯ, ಬೆಳೆ, ದಿನಸಿ, ಮಾಂಸ, ಔಷಧಿ ಮತ್ತಿತರ ವಸ್ತುಗಳಿಗೆ ತೊಂದರೆಯಾಗದಂತೆ ಗಮನ ಹರಿಸಲಾಗಿದೆ. ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ನಿರತರಾಗಿರುವವರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ನೆರವು ನೀಡಬೇಕಾಗಿದೆ. ರಾಜ್ಯದಲ್ಲಿ ಸಾಕಷ್ಟು ಆಹಾರ ಧಾನ್ಯಗಳ ಸಂಗ್ರಹವಿದ್ದು, ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೊರೋನಾಪಾಸಿಟಿವ್ ಇದ್ದರೂ ಅನೇಕ ಮಂದಿ ಗುಣಮುಖರಾಗಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಔಷಧಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT