ಸಂಗ್ರಹ ಚಿತ್ರ 
ರಾಜ್ಯ

ಹುಕ್ಕೇರಿ: ಪಾದಚಾರಿಗಳ ಮೇಲೆ ಹರಿದ ಬೊಲೆರೋ ವಾಹನ, ಸ್ಥಳದಲ್ಲೇ ಮೂವರು ಸಾವು

ಬೊಲೊರೋ ಜೀಪೊಂದು ಪಾದಾಚಾರಿಗಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯಲ್ಲಿ ನಡೆದಿದೆ.

ಚಿಕ್ಕೋಡಿ: ಬೊಲೊರೋ ಜೀಪೊಂದು ಪಾದಾಚಾರಿಗಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಗ್ರಾಮದ ಪ್ರೇಮಾ ರಾಜು ಬಂಗಾರಿ (38), ಜಯಶ್ರೀ ಯಲ್ಲಪ್ಪಾ ಮಾಲದಂಡಿ (40) ಹಾಗೂ ಸುಮಿತ್ರಾ ಭವಾನಿ (45)  ಎನ್ನುವವರು ಮೃತರಾಗಿದ್ದಾರೆ.

ಘಟನೆಯಲ್ಲಿ ಮತ್ತೆ ಮೂವರು ಗಂಬೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ನಡುವೆ ಬೊಲೆರೋ ಚಾಲಕ ಮಾತ್ರ ತನ್ನ ವಾಹನಕ್ಕೆ ಸಿಕ್ಕು ಮೂವರು ಮೃತಪಟ್ಟರೂ ಲೆಕ್ಕಿಸದೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಸಿನಿಮೀಯ ರೀತಿಯಲ್ಲಿ ಹುಕ್ಕೇರಿ ಪೋಲೀಸರು ವಾಹನ ಬೆನ್ನಟ್ಟಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹುಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಮತ್ತೊಂದು ಪವಾಡ; 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೆ ಏರಿಕೆ

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?

RCB ಹೆಸರು ಬದಲಾಗುತ್ತಾ? ವದಂತಿಗಳಿಗೆ ತೆರೆ ಎಳೆದ ಫ್ರಾಂಚೈಸಿ ಅಧ್ಯಕ್ಷ ಆರ್ಯಮನ್ ಬಿರ್ಲಾ!

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ SY Quraishi