ಟಿ.ಎಂ.ವಿಜಯಭಾಸ್ಕರ್ 
ರಾಜ್ಯ

ವಸತಿಗೃಹಗಳು, ಪೇಯಿಂಗ್ ಗೆಸ್ಟ್‌ನಿಂದ ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು: ಟಿ.ಎಂ.ವಿಜಯಭಾಸ್ಕರ್

ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗಸ್ಥರ ವಸತಿಗೃಹಗಳು, ವಿದ್ಯಾರ್ಥಿ ನಿಲಯಗಳಲ್ಲಿರುವವರನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಧಾರವಾಡ: ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಘೋಷಿಸಿರುವ ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗಸ್ಥರ ವಸತಿಗೃಹಗಳು, ವಿದ್ಯಾರ್ಥಿ ನಿಲಯಗಳಲ್ಲಿರುವವರನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಕೊರೊನಾ ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಬೇಕು.

ಮಾ.25 ರಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಹಲವು ಶಿಕ್ಷಣ ಸಂಸ್ಥೆಗಳು ತಮ್ಮ ಹಾಸ್ಟೆಲ್‌ಗಳನ್ನು ಮುಚ್ಚಿರುವುದು ಹಾಗೂ ಅವುಗಳಲ್ಲಿ ವಾಸವಿದ್ದ ಮತ್ತು ತಮ್ಮ ಮನೆಗಳಿಗೆ ಹಿಂದಿರುಗಲು ಸಾಧ್ಯವಾಗದ ವಿದ್ಯಾರ್ಥಿಗಳು ಊಟ - ಉಪಹಾರ ಲಭ್ಯವಿಲ್ಲದೇ ಸಮಸ್ಯೆಗೆ ಒಳಗಾಗಿರುತ್ತಾರೆ. ಅಲ್ಲದೇ, ರಾಜ್ಯಗಳ ಮತ್ತು ಜಿಲ್ಲೆಗಳ ನಡುವೆ ಸಂಚಾರವನ್ನು ನಿರ್ಬಂಧಿಸಿರುವ ಈ ಸಮಯದಲ್ಲಿ ಅವರು ತಮ್ಮ ಮನೆಗಳಿಗೆ ಹಿಂದಿರುಗಲು ಸಾಧ್ಯವಾಗಿರುವುದಿಲ್ಲ. ಅದೇ ರೀತಿ ಕೆಲವು ಉದ್ಯೋಗಸ್ತರನ್ನೂ ಅಲ್ಲಿಂದ ತೆರವುಗೊಳಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಗಳು, ವಿದ್ಯಾರ್ಥಿ ನಿಲಯಗಳಲ್ಲಿ, ಉದ್ಯೋಗಸ್ಥ ಮಹಿಳೆಯರ ವಸತಿ ಗೃಹಗಳಲ್ಲಿ ಹಾಗೂ ಪೇಯಿಂಗ್ ಗೆಸ್ಟ್ ಹೌಸ್‌ನಲ್ಲಿ ಇರುವಂತಹವರನ್ನು ತೆರವುಗೊಳಿಸದಂತೆ ನೋಡಿಕೊಳ್ಳಬೇಕು ಹಾಗೂ ಅವರಿಗೆ ಎಂದಿನಂತೆ ಉಪಹಾರ-ಊಟವನ್ನು ಹೆಚ್ಚಿನ ಶುಚಿತ್ವದೊಂದಿಗೆ ನೀಡುತ್ತಿರುವುದನ್ನು ಖಚಿತಪಡಿಸಿಕೊಂಡು ಯಾವುದೇ ಲೋಪದೋಷಗಳಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತ ದೂರುಗಳಿದ್ದರೆ 1077 ಅಥವಾ 155214 ಸಹಾಯವಾಣಿಗೆ ಸಾರ್ವಜನಿಕರು ಮಾಹಿತಿ ನೀಡಬಹುದು ಎಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT