ರಾಜ್ಯ

ದೆಹಲಿಯ ಮಸೀದಿಯ ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಕೊರೋನಾ ಇಲ್ಲ: ಶ್ರೀರಾಮುಲು

Lingaraj Badiger

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಮಂಗಳವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರ ಸಂಖ್ಯೆ 54 ಎಂಬುದು ಖಚಿತವಾಗಿದೆ. ಇವರು ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಎಂದು ತಿಳಿದು ಬಂದಿದೆ. ಈಗಾಗಲೇ 13 ಜನರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿದ್ದು, ಅವರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ನೆಗಟಿವ್ ವರದಿ ಬಂದಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ದೆಹಲಿಯ ಮಸೀದಿಯಲ್ಲಿ ಮಾ. 10ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ 24 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ  ತುಮಕೂರಿನ ಶಿರಾದಲ್ಲಿ ಇತ್ತೀಚಿಗೆ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ.

SCROLL FOR NEXT