ರಾಜ್ಯ

ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 45 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು

Manjula VN

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ನಡೆದ ಖಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ 45 ಮಂದಿ ಕೂಡ ಭಾಗವಿಸಿದದು, ಇದರಲ್ಲಿ ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಕೂಡ ಇದ್ದಾರೆಂದು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಮಂಗಳವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ 10ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದ ಸುಮಾರು 45 ಮಂದಿ ಕೂಡ ಭಾಗವಹಿಸಿದ್ದಾರೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಿದ್ದಾರೆ. 

ಇದೀಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚು ಕಾರ್ಯ ನಡೆಸಲಾಗುತ್ತಿದ್ದು, ಕ್ವಾರಂಟೈನ್ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇವರಲ್ಲಿ ಈಗಾಗಲೇ 13 ಮಂದಿಯನ್ನು ಪತ್ತೆಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕಾರ್ಯಕ್ರಮಕ್ಕೆ ಆಸ್ಟ್ರೇಲಿಯಾ, ಸಿಂಗಾಪುರ, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರಕಿದೆ. ಉಳಿದ ವ್ಯಕ್ತಿಗಳನ್ನು ಶೀಘ್ರಗತಿಯಲ್ಲಿ ಗುರ್ತಿಸಿ ಅವರನ್ನೂ ಕ್ವಾರಂಟೈನ್ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 

SCROLL FOR NEXT