ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರದಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಪಿಜಿ ಮೆಡಿಕಲ್ ಶುಲ್ಕ ಹೆಚ್ಚಳ

ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ.

ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ.

ಖಾಸಗಿ ಕೋಟಾದ ಸೀಟುಗಳಿಗೆ ಶೇ. 30 ಮತ್ತು ಸರ್ಕಾರಿ ಕೋಟಾದ ಸೀಟುಗಳಿಗೆ ಶೇ. 20 ರಷ್ಟು ಶುಲ್ಕ ಹೆಚ್ಚಳ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2020-21 ನೇ ಸಾಲಿಗೆ ಇದು ಅನ್ವಯವಾಗಲಿದೆ. 

ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ ಖಾಸಗಿ ಕೋಟದಡಿ ಆಯ್ಕೆಯಾದ ಕ್ಲಿನಿಕಲ್ ವಿಭಾಗದ ವಿದ್ಯಾರ್ಥಿಗಳು ಒಟ್ಟು 11,34,705 ರೂ. ಪಾವತಿ ಮಾಡಬೇಕು. ಪ್ಯಾರಾಕ್ಲಿನಿಕಲ್ ವಿದ್ಯಾರ್ಥಿಗಳು 2,83,677 ರೂ. ಹಾಗೂ ಪ್ರಿ ಕ್ಲಿನಿಕಲ್ ವಿದ್ಯಾರ್ಥಿಗಳು 1,42,698 ರೂ. ಶುಲ್ಕ ಪಾವತಿಸಬೇಕು.

ಸರ್ಕಾರಿ ಕೋಟಾದ ಕ್ಲಿನಿಕಲ್ ವಿಭಾಗದ ವಿದ್ಯಾರ್ಥಿಗಳು 6,98,280 ರೂ. ಪ್ಯಾರಾ ಕ್ಲಿನಿಕಲ್ ವಿದ್ಯಾರ್ಥಿಗಳು 1,74,570 ರೂ. ಹಾಗೂ ಪ್ರಿ-ಕ್ಲಿನಿಕಲ್ ವಿದ್ಯಾರ್ಥಿಗಳು 87,286 ರೂ. ಶುಲ್ಕ ಪಾವತಿಸಬೇಕು. ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಗೆ ಖಾಸಗಿ ಕೋಟಾದ ವಿದ್ಯಾರ್ಥಿಗಳು 6,05,176 ರೂ. ಸರ್ಕಾರಿ ಕೋಟಾದ ಅಭ್ಯರ್ಥಿಗಳು 3,57,076 ರೂ. ಪಾವತಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಹೊರಡಿಸಿರುವ ಅದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT