ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ: ರಾಜ್ಯದಲ್ಲಿ ಮೂವರ ಸಾವು, ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ

ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 2 May 2020, 1:32 pm

ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಇಂದು ಮಧ್ಯಾಹ್ನ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ. 

ಈ ನಡುವೆ ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. 

Advertisement

Advertisement

ಶುಕ್ರವಾರ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಹೊಸದಾಗಿ ಒಟ್ಟು 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದರೆ, ಬೀದರ್, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ ಹಾಗೂ ಬಾಗಲಕೋಟೆಯ ಜಮಖಂಡಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. 

ಇದರಂತೆ ಸೋಂಕಿತ 598 ಮಂದಿಯ ಪೈಕಿ 255 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement