ಕಾಂಗ್ರೆಸ್ ಲೋಗೋ 
ರಾಜ್ಯ

ದಕ್ಷಿಣ ಕನ್ನಡ: ಕೊರೋನಾ ಸೋಂಕಿನ ಮೂಲ ಹುಡುಕಲು ಕೆಪಿಸಿಸಿ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ನೈಜ ಮೂಲ ಹುಡುಕಲು ವಿಶೇಷ ತನಿಖಾಧಿಕಾರಿಯನ್ನು ನೇಮಕಗೊಳಿಸುವಂತೆ ಕೆಪಿಸಿಸಿ ವಕ್ತಾರ ಪಿವಿ ಮೋಹನ್ ಆಗ್ರಹಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ನೈಜ ಮೂಲ ಹುಡುಕಲು ವಿಶೇಷ ತನಿಖಾಧಿಕಾರಿಯನ್ನು ನೇಮಕಗೊಳಿಸುವಂತೆ ಕೆಪಿಸಿಸಿ ವಕ್ತಾರ ಪಿವಿ ಮೋಹನ್ ಆಗ್ರಹಿಸಿದ್ದಾರೆ.

ಕೊರೋನಾ ವೈರಾಣುವಿಗೆ ಮತ್ತೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಮಹಿಳೆಗೆ ಸೋಂಕು ದೃಡಪಟ್ಟಿದೆ. ಶಕ್ತಿನಗರ ನಂತರ ಇದೀಗ ಬೊಳೂರು ಗ್ರಾಮವನ್ನು ಸೀಲ್ ಡೌನ್ ಮಾಡಿದ್ದಾರೆ. ಬಫರ್ ಝೋನ್ ಎಂದು ಘೋಷಿಸಲ್ಪಟ್ಟ 5 ಕಿ.ಮೀ ವ್ಯಾಪ್ತಿಯ ಈ ಪ್ರದೇಶದಲ್ಲಿ ಸುಮಾರು 80,000 ಬಡ ಜನರು ವಾಸಿಸುತ್ತಿದ್ದಾರೆ.

ಶಕ್ತಿನಗರದಲ್ಲಿ ಕೂಡಾ ಬಡ ಜನರೇ ಹೆಚ್ಚಾಗಿರುತ್ತಾರೆ. ಇದೀಗ ಜಿಲ್ಲೆಯು ನಿಜವಾಗಿಯೂ ಆತಂಕದಲ್ಲಿದೆ. ವಿಷೇಶವಾಗಿ ಮಂಗಳೂರು ಜನತೆ ಸ್ಥಿತಿಯೂ ಅಪಾಯದಲ್ಲಿದೆ. ಎಪ್ರಿಲ್ 19 ರ ನಂತರ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಮೇಲೆ ಪ್ರಾಥಮಿಕವಾಗಿ 19 ಸೋಂಕು ತಗಲಿದ ಪ್ರಕರಣಗಳು ಮತ್ತು ನಿನ್ನೆಯ 2 ಪ್ರಕರಣಗಳು ಕೂಡಾ ಪಡೀಲ್‍ನಲ್ಲಿರುವ ಒಂದೇ ಆಸ್ಪತ್ರೆಯ ಸಂಪರ್ಕದಿಂದ ಬಂದಿರುತ್ತದೆ. ಮೇಲ್ನೋಟಕ್ಕೆ ಈ ಸೋಂಕಿಗೆ ಮತ್ತು ಕೋವಿಡ್ ಬಲಿಗೆ ಮೂಲ ಕಸಬಾ ಗ್ರಾಮದ ಮಹಿಳೆಯ ಕುಟುಂಬವೇ ಕಾರಣವೆಂಬುದು
ಕಂಡುಬರುತ್ತದೆ ಎಂದು ಹೇಳಿದ್ದಾರೆ.
 
ಮಂಗಳೂರಿನ ಪಡೀಲ್ ಆಸ್ಪತ್ರೆಯು ಜಿಲ್ಲೆಯ ಕೋವಿಡ್‍ನ ಮೂಲ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ. ಮೈಸೂರಿನ ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಯಿಂದ ಸುಮಾರು 70 ಪ್ರಕರಣಗಳು ದಾಖಲಾಗಿವೆ. ಮಂಗಳೂರು ದ.ಕ. ಜಿಲ್ಲೆಯ ಮತ್ತೊಂದು ನಂಜನಗೂಡಾಗಬಾರದು. ಸೋಂಕು ವ್ಯಾಪಕವಾಗುತ್ತಿದೆ ಮೂಲ ನಿಗೂಢವಗಿಯೇ ಇದೆ. ಉನ್ನತ
ಅಧಿಕಾರಿಯಿಂದ ಸರಕಾರವು ತನಿಖೆ ಮಾಡಿಸಬೇಕು. 

ಕೋವಿಡ್‍ನ ಪ್ರಸರಣ ಮತ್ತು ಸೋಂಕಿನ ನೈಜ ಮೂಲವನ್ನು ಹುಡುಕಲು ಸರ್ಕಾರ ಐ.ಪಿ.ಎಸ್ ಮೂಲದ ಅಧಿಕಾರಿಯನ್ನು ನೇಮಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಪಕ್ಷವು ಪ್ರತಿಭಟನೆ ಮಾಡುವ ಹಾಗೆ ಸನ್ನಿವೇಶವನ್ನು ಸರ್ಕಾರ ಈ ಸಮಯದಲ್ಲಿ ಸೃಷ್ಟಿಸಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ