ಸಿಎಂ ಯಡಿಯೂರಪ್ಪ 
ರಾಜ್ಯ

ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನ; ಕೇಂದ್ರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆ: ಸಿಎಂ ಯಡಿಯೂರಪ್ಪ

 ಕೋವಿಡ್‌ 19 ನಿಯಂತ್ರಣ ಹಾಗೂ ಲಾಕ್‌ಡೌನ್‌ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.

ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಹಾಗೂ ಲಾಕ್‌ಡೌನ್‌ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಯಿತು. ಕಂಟೇನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಯಿತು.

ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸೂಚಿಸಲಾಯಿತು.

ಲಾಕ್‌ಡೌನ್‌ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!