ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ! 

ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
Nagaraja AB
Updated On : 3 May 2020, 7:24 pm

ದಾವಣೆಗೆರೆ: ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ನಿನ್ನೆ 10 ಪ್ರಕರಣಗಳು ಕಂಡುಬಂದಿದ್ದ ದಾವಣಗೆರೆಯಲ್ಲಿ ಇಂದು 21 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೇ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ ಆಗಿದೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

ಮೊನ್ನೆ 94, ನಿನ್ನೆ 72 ಇಂದು 164 ಒಟ್ಟಾರೇ 330 ಜನರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಈ ಪೈಕಿ  37 ಜನರ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 21 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. 

Advertisement

Advertisement

ಪ್ರಾಥಮಿಕ ಮಾಹಿತಿ ಪ್ರಕಾರ ಹರಿಹರಕ್ಕೂ ಕೊರೋನಾ ವೈರಸ್ ಸೋಂಕು ಹರಡಿರುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.ರಾಜ್ಯದಲ್ಲಿ ಇಂದು 13 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದಾವಣಗೆರೆಯಲ್ಲಿ 21 ಪ್ರಕರಣಗಳು ಸೇರಿದಂತೆ ಒಟಾರೇ ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆ ಆಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments