ರಾಜ್ಯದಲ್ಲಿ ಇಂದು ಐವರಿಗೆ ವಕ್ಕರಿಸಿದ ಕೊರೋನಾ, ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ!
ಕರ್ನಾಟಕದಲ್ಲಿ ಕೊರೋನಾ ಆರ್ಭಟ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಇಂದು ಐವರಿಗೆ ಕೊರೋನಾ ಸೋಂಕು ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಆರ್ಭಟ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಇಂದು ಐವರಿಗೆ ಕೊರೋನಾ ಸೋಂಕು ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಬೆಳಗ್ಗಿನ ಬುಲೆಟಿನ್ ಬಿಡುಗಡೆ ಮಾಡಿದ್ದು ಈ ಪೈಕಿ ಕಲಬುರಗಿಯಲ್ಲಿ 3 ಮತ್ತು ಬಾಗಲಕೋಟೆಯಲ್ಲಿ 2 ಪ್ರಕರಣಗಲು ಪತ್ತೆಯಾಗಿವೆ. ಇನ್ನು ರಾಜ್ಯದಲ್ಲಿ ಒಟ್ಟು 25 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
606 ಸೋಂಕಿತರ ಪೈಕಿ 282 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.