ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪರಾರಿಗೆ ಯತ್ನಸಿದ ಕೊಲೆ ಆರೋಪಿ ಕಾಲಿಗೆ ಗುಂಡೇಟು

ರೌಡಿಶೀಟರ್ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆಯೇ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಬೆಂಗಳೂರು: ರೌಡಿಶೀಟರ್ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆಯೇ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಕಳೆದ ಎರಡು ದಿನಗಳ ಹಿಂದಷ್ಟೇ ರೌಡಿಶೀಟರ್ ಬಿಜು ಅಲಿಯಾಸ್ ಬಾಗಲೂರು ಲೇಔಟ್​ನ ಬುಜ್ಜಿ (30) ಹತ್ಯೆ ಪ್ರಕರಣದ ಆರೋಪಿ ಸಂಜಯ್​ ಅಲಿಯಾಸ್ ಆ್ಯಂಡ್ರೂಸ್​ನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

 ಈ ಸಂದರ್ಭದಲ್ಲಿ ಆರೋಪಿ ಸಂಜಯ್ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಲು ಯತ್ನಿಸಿದ್ದನು. ತಕ್ಷಣವೇ ಇನ್​ಸ್ಪೆಕ್ಟರ್ ಅಜಯ್ ಸಾರಥಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಆತನನ್ನು ಶರಣಾಗುವಂತೆ ಸೂಚಿಸಿದ್ದಾರೆ. 

ಆದರೂ, ಆತ ಮತ್ತೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಎದುರಾಳಿ ಡ್ಯಾನಿಯಲ್ ಗ್ಯಾಂಗ್ ಜತೆಗೆ ಗಲಾಟೆ ಮಾಡಿಕೊಂಡಿದ್ದ ಬಾಗಲೂರು ಲೇಔಟ್‌ನ ರೌಡಿಶೀಟರ್ ಬುಜ್ಜಿಯನ್ನು (30) ಶನಿವಾರ ಕೊಲೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT