ಯಡಿಯೂರಪ್ಪ 
ರಾಜ್ಯ

ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಇನ್ನೂ 2 ದಿನ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳುವುದಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ರವಿವಾರದಂದು 951 ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನು ಒದಗಿಸಲಾಗಿದ್ದು, ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.

ಇಂದು ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ. ಶನಿವಾರದಂದು ಕೂಡ 550 ಬಸ್‌ಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರವಿವಾರದಂದು ಎರಡು ರೈಲುಗಳು ಬಿಹಾರದ ಪಾಟ್ನಾ ಒಂದು ಜಾರ್ಖಂಡ್‌ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಸ್ಸಾದ ಭುವನೇಶ್ವರಕ್ಕೆ ಒಂದು ರೈಲು, ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ.

ಸೋಮವಾರದಂದು ಎರಡು ರೈಲುಗಳು ರಾಜಸ್ತಾನದ ಜೈಪುರ್ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!