ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಲಸೆ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ: ಕುಮಾರಸ್ವಾಮಿ

ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿ
Shilpa D
Updated On : 4 May 2020, 12:43 pm

ಬೆಂಗಳೂರು: ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ  ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸುವುದು ಸವಾಲಿನ ವಿಷಯವೇ, ಹಾಗಂತ ಅವರ ಆರೋಗ್ಯವನ್ನು ಅಪಾಯಕ್ಕೆ ತಳ್ಳಬಾರದು ಎಂದು ಹೇಳಿದ್ದಾರೆ. "ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್‌ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೇ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಇಷ್ಟು ದಿನ ಸಾವಿರಾರು ಕೋಟಿ ರೂಪಾಯಿಗಳನ್ನು ನಷ್ಟ ಮಾಡಿಕೊಂಡು ಪಾಲಿಸಲಾದ ಲಾಕ್‌ಡೌನ್‌ನಿಂದ ಗಳಿಸಿಕೊಂಡಿದ್ದನ್ನು ಸರ್ಕಾರ ಒಂದು ಅವೈಜ್ಞಾನಿಕ ನಡೆಯಿಂದ ಕಳೆದುಕೊಳ್ಳಬಾರದು. ಕಾರ್ಮಿಕರು ಮತ್ತು ಹಳ್ಳಿಗಳು ಸೌಖ್ಯವಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಮಿಕರನ್ನು ಊರುಗಳಿಗೆ ತಲುಪಿಸುವುದು ಆಗಬೇಕಾದ ಕಾರ್ಯವೇ. ಆದರೆ, ಈ ಕಾರ್ಯದಲ್ಲಿ ಅವರ ಆರೋಗ್ಯಕ್ಕೆ ಅಪಾಯ ಎದುರಾಗಬಾರದು. ಅವರ ಹಿತಕ್ಕಾಗಿ ಕೈಗೊಂಡ ಈ ನಿರ್ಧಾರವೇ ಅವರಿಗೆ ಸಂಚಕಾರವಾಗಿ ಪರಿಣಮಿಸಬಾರದು. ಬಸ್‌ ಗಳಲ್ಲೂ ದೈಹಿಕ ಅಂತರ ಪಾಲನೆಯಾಗಲಿ, ಸೂಕ್ತ ರೀತಿಯ ಪರೀಕ್ಷೆಗಳು ನಡೆಯಲಿ ಎಂದು ಎಚ್. ಡಿ. ಕುಮಾರಸ್ವಾಮಿ  ಹೇಳಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement