ರಾಜ್ಯ

ಬೆಂಗಳೂರಿನಿಂದ ವಲಸೆ ಕಾರ್ಮಿಕರನ್ನು ಹೊತ್ತೊಯ್ದ ಶ್ರಮಿಕ್ ವಿಶೇಷ ರೈಲು

Shilpa D

ಬೆಂಗಳೂರು: ಬೆಂಗಳೂರಿನಲ್ಲಿರುವ  ಬಿಹಾರ, ಒಡಿಶಾ ಮತ್ತು ಜಾರ್ಖಂಡ್‌ನ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ರೈಲ್ವೆ ವಿಭಾಗವು ಭಾನುವಾರ ನಾಲ್ಕು ವಿಶೇಷ ರೈಲುಗಳನ್ನು ತ್ವರಿತವಾಗಿ  ಸಂಚಾರ ಆರಂಭಿಸಿದೆ.

ಶ್ರಮಿಕ್ ವಿಶೇಷ ರೈಲಿನಲ್ಲಿ ಸುಮಾರು 4,790 ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ತೆರಳಿದರು. ಲಾಕ್ ಡೌನ್ ನಿಂದಾಗಿ ಹಸಿವಿನಿಂದ ಬಳಲುತ್ತಿದ್ದವರಿಗೆ ಸದ್ಯ ರಿಲೀಫ್ ಸಿಕ್ಕಿದೆ.

ಕಡಿಮೆ ಸಂಖ್ಯೆ ಇದ್ದ ಕಾರಣ ಭುವನೇಶ್ವರಕ್ಕೆ ಹೋಗಬೇಕಿದ್ದ 5ನೇ ರೈಲು ಸಂಚರಿಸಲಿಲ್ಲ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾರೂಕಾ ಕ್ರಮ ಕೈಗೊಳ್ಳಲಾಗಿತ್ತು, ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಮೊದಲ ಶ್ರಮಿಕ ರೈಲು ಚಿಕ್ಕಾಬಾಣವಾರ ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸಿತು. ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯವಾಗಿತ್ತು, ಮತ್ತು ಆರೋಗ್ಯ ತಪಾಸಣೆ ನಡೆಸಲಾಗಿತ್ತು. ನಗರದ ವಿವಿಧ ಪ್ರದೇಶಗಳಿಂದ ಪ್ರಯಾಣಿಕರನ್ನು ಕರೆತರಲು ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು. 47 ಬಿಎಂಟಿಸಿ ಬಸ್ ಪ್ರಯಾಣಿಕರನ್ನು ರೈಲ್ವೆ ನಿಲ್ದಾಣಕ್ಕೆ ಕರೆ ತಂದವು.
ರೈಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿತ್ತು.

SCROLL FOR NEXT