ಸಂಗ್ರಹ ಚಿತ್ರ 
ರಾಜ್ಯ

ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ

ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ  ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌  ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ  ಪಾವತಿಗೆ ಒತ್ತಾಯಿಸಬಾರದ ಎಂದೂ ಕೂಡ ತಿಳಿಸಲಾಗಿತ್ತು.

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪೋಷಕರು ಕಂತುಗಳ ಮೂಲಕ ಕಾಲೇಜು ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು. 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. ಒಂದು ವೇಳೆ ಈ  ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ಈ ಹಿಂದೆ ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT