ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಕೊರೋನಾ ಸೋಂಕಿಗೆ ಮೂರನೇ ವ್ಯಕ್ತಿ ಸಾವು

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ‌ ಏರಿಕೆ ಆಗಿದೆ.

ವಿಜಯಪುರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ‌ ಏರಿಕೆ ಆಗಿದೆ.

ಮಂಗಳವಾರ 640ನೇ ಕೊರೊನಾ ಪೀಡಿತ 62 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಸೋಂಕಿತರು ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಬಳಲುತ್ತಿದ್ದರು. ರೋಗಿ ಸಂಖ್ಯೆ 228 ಸಂಪರ್ಕದಿಂದ ಮೃತ ಮಹಿಳೆಗೆ ಸೋಂಕು ತಗುಲಿತ್ತು. 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 47 ಪ್ರಕರಣಗಳು ವರದಿಯಾಗಿದ್ದು ಅದರಲ್ಲಿ ಮೂವರು ಸಾವನ್ನಪ್ಪಿದ್ದರೆ 19 ಮಂದಿ ಗುಣಮುಖರಾಗಿದ್ದಾರೆ.

ಇದೀಗ ಮೃತ ಮಹಿಳೆಯ ಅಂತ್ಯ ಸಂಸ್ಕಾರವನ್ನು ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದ ಅನುಸಾರ ನಡೆಸಲಾಗಿದೆ. ಇದಕ್ಕೆ ಹಿಂದೆ ಜಿಲ್ಲೆಯಲ್ಲಿ ಇಬ್ಬರು ಕೊರೋನಾ ಸೋಂಕಿತರು ಸಾವಿಗೀಡಾಗಿದ್ದರು.ರೋಗಿ 257 (69 ವರ್ಷ)ದ ವೃದ್ಧ ಹಾಗೂ ರೋಗಿ ನಂಬರ್ 374 (42 ವರ್ಷ)ದ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT