ರಾಜ್ಯ

ಕೊರೋನಾ ವಾರಿಯರ್ಸ್‌ಗಳಿಗೆ 30 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಸರ್ಕಾರ ಅನುಮೋದನೆ

Srinivasamurthy VN

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವವರಿಗೆ ಸರ್ಕಾರ 30 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಮ್ ಗಾರ್ಡ್ಸ್‌ಗಳು, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳು, ಬಂದೀಖಾನೆ ಸಿಬ್ಬಂದಿಗಳು, ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, ಅವರಿಗೆ ಸಂಬಂಧಿಸಿದ ವಾಹನಗಳ ಚಾಲಕರು, ಲೋಡರ್‌ಗಳು ಈ ಮೂರು ವರ್ಗಗಳಿಗೆ ಪ್ರಧಾನ ಮಂತ್ರಿ ಗರೀಭ್ ಕಲ್ಯಾಣ ಯೋಜನೆಯ ಮಾರ್ಗಸೂಚಿಗಳಂತೆ ಕೋವಿಡ್‌ ಕೆಲಸದಲ್ಲಿ ಪಾಲ್ಗೊಂಡಿದ್ದು, ಕೋವಿಡ್ 19 ರೋಗದಿಂದ ಮೃತರಾದಲ್ಲಿ ಈ ಕೆಲಸದಲ್ಲಿರುವವರಿಗೆ ಮನೋಸ್ಥೈರ್ಯ ಹೆಚ್ಚಿಸಲು 30 ಲಕ್ಷ ರೂ.ಪರಿಹಾರ ಒದಗಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ. ಏಕರೂಪ್‌ ಕೌರ್ ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್ -19 ತಡೆಗಟ್ಟುವ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಮ್‌ ಗಾರ್ಡ್ಸ್‌, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳು, ಬಂದೀಖಾನೆ ಸಿಬ್ಬಂದಿಗಳು ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, ಅವರಿಗೆ ಸಂಬಂಧಿಸಿದ ವಾಹನಗಳ ಚಾಲಕರು, ಲೋಡರ್‌ಗಳನ್ನು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಂತೆ ಕೋವಿಡ್‌-19 ರಿಂದ ಮೃತರಾದಲ್ಲಿ, ಅಥವಾ ಕೋವಿಡ್‌ 19ರ ಕಾರ್ಯದಲ್ಲಿ ತೊಡಗಿದ್ದಾಗ ಮೃತರಾದಲ್ಲಿ 50 ಲಕ್ಷ ರೂ.ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾಪಿಸಲಾಗಿತ್ತು. ಆದರೆ ಇದೀಗ ಸರ್ಕಾರ 30 ಲಕ್ಷ ರೂ.ಪರಿಹಾರ ನೀಡಲು ಅನುಮೋದನೆ ನೀಡಿದೆ

SCROLL FOR NEXT