ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವೈರಸ್: ರಾಜ್ಯದಲ್ಲಿ ಸೋಂಕಿತರಿಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚು!

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನತೆಯಲ್ಲಿ ಸಾಕಷ್ಟು ಆತಂಕ ಹುಟ್ಟಿಸಿರುವ ನಡುವಲ್ಲೇ ತುಸು ನೆಮ್ಮದಿಯ ಬೆಳವಣಿಗೆಗಳು ಇದೀಗ ಕಂಡು ಬರುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನತೆಯಲ್ಲಿ ಸಾಕಷ್ಟು ಆತಂಕ ಹುಟ್ಟಿಸಿರುವ ನಡುವಲ್ಲೇ ತುಸು ನೆಮ್ಮದಿಯ ಬೆಳವಣಿಗೆಗಳು ಇದೀಗ ಕಂಡು ಬರುತ್ತಿದೆ. ರಾಜ್ಯದಲ್ಲೀಗ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. 

ರಾಜ್ಯದಲ್ಲಿ ಸೋಮವಾರ 16 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 651ಕ್ಕೆ ತಲುಪಿದೆ. ಇದೇ ವೇಳೆ ದಾವಣಗೆರೆ ಹಾಗೂ ಕಲಬುರಗಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಉಳಿದಂತೆ ಸೋಮವಾರ 28 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಸಕ್ರಿಯ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿರುವುದು ತುಸು ನೆಮ್ಮದಿ ತಂದಿದೆ. 

651 ಮಂದಿ ಸೋಂಕಿತರ ಪೈಕಿ 27 ಮಂದಿ ಮೃತಪಟ್ಟಿದ್ದು, 321 ಮಂದಿ ಗುಣಮುಖರಾಗಿದ್ದಾರೆ. ಉಳಿದ 302 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ದೃಢಪಟ್ಟ ಪ್ರಕರಣಗಳ ಪೈಕಿ ಬೀದರ್'ನ ಏಳು ಮಂದಿ, ಮಂಡ್ಯ ಹಾಗೂ ಕಲಬುರಗಿಯ ಇಬ್ಬರು, ಬೆಂಗಳೂರು, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ವಿಜಯಪುರದಲ್ಲಿ ತಲಾ ಒಬ್ಬರು ಸೋಂಕಿತರಾಗಿದ್ದಾರೆ. ಹಸಿರು ವಲಯದಲ್ಲಿದ್ದ ಹಾವೇರಿಯಲ್ಲೂ ಈಗ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ಬೆೇಗೂರು ಠಾಣೆ ಪೊಲೀಸ್ ಪೇದೆಗೆ ಸೋಂಕು ಉಂಟಾಗಿರುವುದು ಆತಂಕ ಸೃಷ್ಟಿಸಿದೆ. 

ದಾವಣಗೆರೆಯಲ್ಲಿ ಮತ್ತೊಬ್ಬರು 48 ವರ್ಷದ ಕೊರೋನಾ ವೈರಸ್ ಸೋಂಕಿತ ಮಹಿಳೆ ಮೃತಪಟ್ಟಿದ್ದು, ಇವರಿಗೆ ಇತ್ತೀಚೆಗೆ ಸೋಂಕಿಗೊಳಗಾಗಿದ್ದ ನರ್ಸ್ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಪರೀಕ್ಷೆಯಿಂದ ದೃಢಪಟ್ಟಿದೆ. ಮತ್ತೊಂದು ಪ್ರಕರಣದಲ್ಲಿ ಕಲಬುರಗಿಯ 56 ವರ್ಷದ ಸೋಂಕಿತ ಪುರುಷ ಸಾವಿಗೀಡಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!