ಎಸ್.ಸುರೇಶ್ ಕುಮಾರ್ 
ರಾಜ್ಯ

ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಚಿಂತನೆ: ಫೇಸ್‌ಬುಕ್ ಲೈವ್ ನಲ್ಲಿ ಸಚಿವ ಸುರೇಶ್ ಕುಮಾರ್

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ  ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ  ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು ತಿಳಿಸಿದ್ದಾರೆ.ಆದರೆ, ಅಂತಿಮವೇಳಾಪಟ್ಟಿಯನ್ನು  20 ರಿಂದ 30 ದಿನಗಳ ಒಳಗೆ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ತಪಡಿಸಿದ್ದಾರೆ.

ಸುರೇಶ್ ಕುಮಾರ್ ಅವರು ಮಂಗಳವಾರ ಬೆಳಿಗ್ಗೆ ಫೇಸ್‌ಬುಕ್ ಲೈವ್ ನಲ್ಲಿ ಮಾತನಾಡಿದ್ದು ಪಈಕ್ಷಾ ಕೇಂದ್ರಗಳಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡಿಕೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಕೇಂದ್ರಗಳಲ್ಲಿ ಸ್ಯಾನಿಟೈಜರ್‌ ಬಳಕೆ ಹಾಗೂ ಸಾಮಾಜಿಕ ಅಂತರ ನೋಡಿಕೊಳ್ಳುವಂತೆ ಅವರು ಕೇಳಿದರು ಮತ್ತು ಪರೀಕ್ಷಕರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ ದೂರದರ್ಶನ ಚಂದನ ವಾಹಿನಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಷ್ಕರಣೆಗಾಗಿ ಕನ್ನಡದಲ್ಲಿ ಗಣಿತ ಮತ್ತು ವಿಜ್ಞಾನ ತರಗತಿಗಳನ್ನು ಪ್ರಸಾರ ಮಾಡುತ್ತಿದೆ. ಜೂನ್ ಮೊದಲ ವಾರದ ವೇಳೆಗೆ ದೂರದರ್ಶನ ಚಾನೆಲ್‌ನಲ್ಲಿ ಇಂಗ್ಲಿಷ್ ತರಗತಿಗಳು ಪ್ರಾರಂಭವಾಗಲಿವೆ ಎಂದು ಅವರು ಹೇಳಿದರು. ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ಸಾಹದಿಂದ ಸಿದ್ದವಿದ್ದಾರೆ ಎಂದಿರುವ ಸಚಿವ ಆದರೆ ಕೊರೋನಾ ಸಂಕಷ್ಟದ ವೇಳೆ ಪರೀಕ್ಷೆ ಸೂಕ್ತವಾಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT