ಲಕ್ಷ್ಮಣ ಸವದಿ 
ರಾಜ್ಯ

ಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ, ಆತಂಕ ಬೇಡ: ಲಕ್ಷ್ಮಣ ಸವದಿ

ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರು:  ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡದೇ ಸಾರಿಗೆ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವದ ಭಯ ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನು ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.

ಸಾರಿಗೆ ಸಿಬ್ಬಂದಿಗಳ ವೇತನವನ್ನು ಮೂರು-ನಾಲ್ಕು ದಿನಗಳಲ್ಲಿ ಅವರವರ ಅಕೌಂಟ್ ಗಳಿಗೆ ತಲುಪಿಸುತ್ತೇವೆ. ಸಿಬ್ಬಂದಿಗಳಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.

ಸಾರಿಗೆ ಸಿಬ್ಬಂದಿಗಳ ವೇತನ ಸಂಬಂಧ ನಾನೀಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಡನೆ ಮಾತನಾಡಿದ್ದೇನೆ. ಸರ್ಕಾರದಿಂದ ನೇರವಾಗಿ  326 ಕೋಟಿ ರೂಪಾಯಿ ಪಡೆದುಕೊಂಡು ವೇತನ ನೀಡುವ ಕೆಲಸ ಮಾಡಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ಇದೇ ವೇಳೆ ವಲಸೆ ಕಾರ್ಮಿಕರಿಗೆ ಅವರವರ ಊರಿಗೆ ತೆರಳುವ ಸಲುವಾಗಿ ಸಾರಿಗೆ ಸಂಸ್ಥೆ ನೀಡಿರುವ ಉಚಿತ ಪ್ರಯಾಣ ಸೌಲಭ್ಯ ನಾಳೆ ಕೊನೆಗೊಳ್ಲಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!