ಸಚಿವ ಸುಧಾಕರ್ 
ರಾಜ್ಯ

ವೃತ್ತಿನಿರತ ಪತ್ರಕರ್ತರು ಕೋವಿಡ್‌-19 ವಿಮಾ ವ್ಯಾಪ್ತಿಗೆ: ಸಚಿವ ಡಾ.ಕೆ.ಸುಧಾಕರ್

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ  ಡಾ.ಕೆ.ಸುಧಾಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ  ಡಾ.ಕೆ.ಸುಧಾಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರೊಂದಿಗೆ ಕೈಜೋಡಿಸಿ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಮಾಧ್ಯಮದವರನ್ನು ಕೂಡ ಕೊರೋನಾ ವಾರಿಯರ್ಸ್‌ ಎಂದು ಪರಿಗಣಿಸಿ ಅವರನ್ನೂ ಆರೋಗ್ಯ ವಿಮೆ ಸೌಲಭ್ಯ ವ್ಯಾಪ್ತಿಗೆ ತರಬೇಕು ಎಂದು ಇತ್ತೀಚೆಗೆ ಪತ್ರಕರ್ತರ  ಸಂಘ ಮುಖ್ಯಮಂತ್ರಿಯವರಿಗೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.

ಲಾಕ್ ಡೌನ್ ನಿಂದಾಗಿ ತೊಂದರೆ ಎದುರಿಸುತ್ತಿರುವ ಎಲ್ಲ ವರ್ಗದ ಜನರಿಗೆ ನೆರವಾಗಲು 1,610 ಕೋಟಿ ರೂ. ಮೊತ್ತದ ಪ್ಯಾಕೇಜ್ ಅನ್ನು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ನೇಕಾರರ ಸಮ್ಮಾನ್ ಯೋಜನೆ, ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ ಸಹಾಯಧನ, ಉದ್ದಿಮೆಗಳ  ಉತ್ತೇಜನ ಸೇರಿದಂತೆ ಹಲವು ಮಹತ್ವಪೂರ್ಣ, ಜನಪರ ಘೋಷಣೆಗಳನ್ನು ಮಾಡಿದ್ದಾರೆ ಎಂದು ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT