ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ದಾವಣಗೆರೆ ಮಹಿಳೆ ಸಾವು, 8 ಹೊಸ ಕೊರೋನಾ ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ

ರಾಜ್ಯದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಮತ್ತೆ ಎಂಟು ಕೊರೋನಾ ಪ್ರಕರಣಗಳು ದೃಢವಾಗಿದ್ದು ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಳುನೂರರ ಗಡಿ ದಾಟಿದೆ.

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಮತ್ತೆ ಎಂಟು ಕೊರೋನಾ ಪ್ರಕರಣಗಳು ದೃಢವಾಗಿದ್ದು ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಳುನೂರರ ಗಡಿ ದಾಟಿದೆ.

ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ರಕ್ತದೊತ್ತಡದ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರ ಹೊರಡಿಸಿದ ಬುಲೆಟಿನ್ ನಲ್ಲಿರುವಂತೆ ರಾಜ್ಯದ ಒಟ್ತಾರೆ ಸೋಂಕಿತರ ಸಂಖ್ಯೆ 701 ಇದ್ದು, ಇದರಲ್ಲಿ 30 ಮಂದಿ ಸಾವನ್ನಪ್ಪಿದ್ದರೆ, 363 ಮಂದಿ ಗುಣಮುಖರಾಗಿದ್ದಾರೆ.

ಇಂದಿನ ಪ್ರಕರಣಗಳ ಪೈಕಿ, ದಾವಣಗೆರೆಯಲ್ಲಿ ಇಂದು ಮೃತಪಟ್ಟ 55 ವರ್ಷದ ಮಹಿಳೆ, ಜ್ವರದ ಲಕ್ಷಣಗಳನ್ನು ಹೊಂದಿದ್ದ 53 ಹಾಗೂ 40 ವರ್ಷದ ಮಹಿಳೆಯರು, ಕಲಬುರಗಿಯಲ್ಲಿ ಸೋಂಕಿತರ ಸಂಪರ್ಕ ಹೊಂದಿದ್ದ 35  ಹಾಗೂ 36 ವರ್ಷದ ವ್ಯಕ್ತಿಗಳು, ಬೆಳಗಾವಿಯ ಹಿರೇಬಾಗೇವಾಡಿಯ 13 ವರ್ಷದ ಬಾಲಕಿ, ಬೆಂಗಳೂರು ನಗರದ 49 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video